ಚಾಮರಾಜನಗರ

ಚಾಮರಾಜನಗರ| ದೀಪಾವಳಿ ಜಾತ್ರೆಗೆ ಸಜ್ಜಾಗುತ್ತಿರುವ ಮಲೆ ಮಹದೇಶ್ವರ ಬೆಟ್ಟ

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ.

ಅಕ್ಟೋಬರ್.‌18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ.

ಅಕ್ಟೋಬರ್.‌19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ ವಿಶೇಷ ಸೇವೆ, ಉತ್ಸವಾದಿಗಳು ನಡೆಯಲಿವೆ. ಅಕ್ಟೋಬರ್.‌20ರಂದು ನರಕ ಚತುರ್ದಶಿ, ವಿಶೇಷ ಸೇವೆ ಹಾಗೂ ಉತ್ಸವಾದಿಗಳು, ಅಕ್ಟೋಬರ್.‌21ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆಯಿಂದಲೇ ಹಾಲರವಿ ಸೇವೆ ಸೇರಿದಂತೆ ವಿಶೇಷ ಸೇವೆ ಮತ್ತು ಉತ್ಸವಾದಿಗಳು ನಡೆಯಲಿವೆ.

ಇದನ್ನೂ ಓದಿ:-ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌

ಅಕ್ಟೋಬರ್.‌22ರಂದು ಬೆಳಿಗ್ಗೆ 9.15ರಿಂದ 9.55ರವರೆಗೆ ದೀಪಾವಳಿ ಮಹಾರಥೋತ್ಸವ ನಡೆಯಲಿದೆ. ಅಕ್ಟೋಬರ್.‌27ರಂದು ಕಾರ್ತಿಕ ಸೋಮವಾರ ಜಾತ್ರಾ ಮಹೋತ್ಸವ ಆರಂಭವಾಗಲಿವೆ.

ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದಾರೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಸಾರ್ವಜನಿಕರು ಆಗಮಿಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

12 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

13 hours ago