Mysore
26
scattered clouds
Light
Dark

ಚಾಮರಾಜನಗರ: ಗಾಂಜಾ ಬೆಳೆದ ವ್ಯಕ್ತಿ ಬಂಧನ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಗ್ರಾಮದ ಪೆರಯಾನ್ ಗೌಂಡರ್ ಬಂಧಿತ ಆರೋಪಿ. ಖಚಿತ ಮಾಹಿತೆ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಎ.ಎಸ್. ಸುಪ್ರೀತ್ ದಾಳಿ ಮಾಡಿ
ಬಂಧಿತ ಆರೋಪಿಯಿಂದ 430 ಗ್ರಾಂ ತೂಕದ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.