ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, 5 ಮಂದಿ ಮಹಿಳೆಯರು ಭಾಗಿಯಾಗಿದ್ದರು.
ಪುರುಷರ ವಿಭಾಗದಲ್ಲಿ ಕುನ್ನ ನಾಯಕ ಎಂಬುವವರು 11 ಮುದ್ದೆ ತಿಂದು ಪ್ರಥಮ ಸ್ಥಾನ ಪಡೆದಿದ್ದು, ನಾಗಮಲ್ಲ ನಾಯಕ ಎಂಬುವವರು 9 ಮುದ್ದೆ ತಿಂದು ಎರಡನೇ ಸ್ಥಾನ ಪಡೆದಿದ್ದಾರೆ.
ಇನ್ನು ಮಹಿಳೆಯರ ವಿಭಾಗದಲ್ಲಿ ಮಾದೇವಮ್ಮ ಎಂಬುವವರು 5 ಮುದ್ದೆ ತಿಂದು ಮೊದಲ ಸ್ಥಾನ ಪಡೆದರು. ಪ್ರಥಮ ಸ್ಥಾನ ಪಡೆದವರಿಗೆ 5000 ಸಾವಿರ ಬಹುಮಾನ ನೀಡಲಾಗಿದ್ದು, ದ್ವಿತೀಯ ಸ್ಥಾನ ಪಡೆದವರಿಗೆ 2500 ರೂಪಾಯಿ ಬಹುಮಾನ ನೀಡಲಾಯಿತು.
ಇನ್ನು, ಈ ಸ್ಪರ್ಧೆಗೆ 200 ಮುದ್ದೆ ಹಾಗೂ 30 ಕೆಜಿ ನಾಟಿ ಕೋಳಿ ಸಾರನ್ನು ತಯಾರು ಮಾಡಲಾಗಿತ್ತು.
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…