ಚಾಮರಾಜನಗರ

ಚಾಮರಾಜನಗರ| ಕಳಪೆ ಗುಣಮಟ್ಟದ ಉಪ್ಪು;ಅಂಗಡಿ ಮಾಲೀಕರಿಗೆ ೧೦ ಸಾವಿರ ರೂ.ದಂಡ

ಚಾಮರಾಜನಗರ: ಕಳಪೆ ಗುಣಮಟ್ಟದ ಉಪ್ಪು ಇಡಲಾಗಿದ್ದ ಯಳಂದೂರು ಪಟ್ಟಣದ ಬಿ.ಆರ್. ಹಿಲ್ಸ್ ರಸ್ತೆಯಲ್ಲಿರುವ ಅಂಬೆ ಜನರಲ್ ಸ್ಟೋರ್ ಮಾಲೀಕರಿಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ.

ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ಅವರ ಅಂಗಡಿಯಿಂದ ಆಗಸ್ಟ್ 2024ರ ಮಾಹೆಯಲ್ಲಿ ಸಂಶಯಾಸ್ಪದ ಆಶೀರ್ವಾದ್ ಐಯೋಡೈಸ್ಡ್ ಪುಡಿ ಉಪ್ಪಿನ  ಮಾದರಿಯನ್ನು ಆಹಾರ ಸುರಕ್ಷತಾ ಅಧಿಕಾರಿ ಶ್ರೀನಿವಾಸ ಅವರು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗ ಶಾಲೆಗೆ ಕಳುಹಿಸಿದ್ದರು. ವಿಶ್ಲೇಷಣಾ ವರದಿಯಲ್ಲಿ ಸದರಿ ಆಶೀರ್ವಾದ್ ಆಯೋಡಿನ್ ಯುಕ್ತ ಪುಡಿ ಉಪ್ಪು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ದೃಢಪಟ್ಟಿತ್ತು.

ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ನಿಯಮ ಹಾಗೂ ನಿಬಂಧನೆ-2011 ರಡಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಮೊಕದ್ದಮೆಯನ್ನು ನಡೆಸಿದ ನ್ಯಾಯನಿರ್ಣಯಾಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10000 ರೂ. ದಂಡ ವಿಧಿಸಿ ಡಿಸೆಂಬರ್ 2ರಲ್ಲಿ ತೀರ್ಪು ನೀಡಿದ್ದಾರೆ. ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ದಂಡ ಪಾವತಿಸಿದ್ದಾರೆ.

ಸದರಿ ಬ್ಯಾಚ್‌ನ ಅಡುಗೆ ಉಪ್ಪನ್ನು ಯಾವುದೇ ಕಾರಣಕ್ಕೂ ಮಾರಾಟ, ಸಂಗ್ರಹಣೆ ಮಾಡದಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೂಪದಲ್ಲಿ ಮಾರಾಟ ಮಾಡದಂತೆ ಸಾರ್ವಜನಿಕ ಹಿತದೃಷ್ಠಿಯಿಂದ ನಿಷೇಧಿಸಿ ತೀರ್ಪು ನೀಡಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಪ್ರಾಧಿಕಾರದ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

8 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

14 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

18 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago