Mysore
26
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಚಾಮರಾಜನಗರ: ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಇಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ವಾಹನ ತಡೆದು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಕರವೇ ತಾಲ್ಲೂಕು ಅಧ್ಯಕ್ಷ ಕ್ವಾಲಿಟಿ ನವೀನ್ ಮಾತನಾಡಿ ಘಟನೆಯ ಬಗ್ಗೆ ಖಂಡಿಸಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಆರ್. ಮೋಹನ್, ಉಪಾಧ್ಯಕ್ಷ ಬಾಬು ರಾಮಸಮುದ್ರ, ಅವಿನಾಶ್, ಗೌರವಾಧ್ಯಕ್ಷ ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಅರ್ಜುನ್, ಕೊಳ್ಳೇಗಾಲ ತಾಲೂಕಿನ ಅಧ್ಯಕ್ಷ ಜಗದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳಮ್ಮ, ಪ್ರಧಾನ ಕಾರ್ಯದರ್ಶಿ ಶಿವಮ್ಮ, ರೇಖಾ ಪದಾಧಿಕಾರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

Tags:
error: Content is protected !!