ಚಾಮರಾಜನಗರ: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಇಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ವಾಹನ ತಡೆದು ಪ್ರತಿಭಟನೆ ನಡೆಸಿದರು.
ಇದೇ ವೇಳೆ ಕರವೇ ತಾಲ್ಲೂಕು ಅಧ್ಯಕ್ಷ ಕ್ವಾಲಿಟಿ ನವೀನ್ ಮಾತನಾಡಿ ಘಟನೆಯ ಬಗ್ಗೆ ಖಂಡಿಸಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಆರ್. ಮೋಹನ್, ಉಪಾಧ್ಯಕ್ಷ ಬಾಬು ರಾಮಸಮುದ್ರ, ಅವಿನಾಶ್, ಗೌರವಾಧ್ಯಕ್ಷ ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಅರ್ಜುನ್, ಕೊಳ್ಳೇಗಾಲ ತಾಲೂಕಿನ ಅಧ್ಯಕ್ಷ ಜಗದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳಮ್ಮ, ಪ್ರಧಾನ ಕಾರ್ಯದರ್ಶಿ ಶಿವಮ್ಮ, ರೇಖಾ ಪದಾಧಿಕಾರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…