ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡು ಮೂಲದ ಸೆಡೆಯಾನ್ ಎಂಬಾತನೇ ಬಂದಿತ ಆರೋಪಿಯಾಗಿದ್ದಾನೆ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 33 ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನು ಓದಿ : ಜಾತಿ ಗಣತಿಯಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಮಧು ಬಂಗಾರಪ್ಪ
ಭಕ್ತರ ಸೋಗಿನಲ್ಲಿ ಬೆಟ್ಟಕ್ಕೆ ಬಂದು ಬಳಿಕ ಮಹದೇಶ್ವರ ಬೆಟ್ಟದ ವನ್ಯಧಾಮದ ಮೀಸಲು ಅರಣ್ಯ ಪ್ರದೇಶ ಪ್ರವೇಶಿಸುತ್ತಿದ್ದರು. ಅಲ್ಲಿ ಗಂಧದ ಮರಗಳನ್ನು ಕತ್ತರಿಸಿ ಕೊಂಡೊಯ್ಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.





