ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ.
ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದಲ್ಲಿ ಹುಲಿಗಳು ದಿನಕ್ಕೊಂದು ಪಥ ಬದಲಾಯಿಸುತ್ತಿದ್ದು, ಕಳೆದ ತಡರಾತ್ರಿ ಜಮೀನಿನ ಕಡೆ ಸಾಗಿವೆ. ಹುಲಿಗಳ ಚಲನವಲನದ ದೃಶ್ಯ ಜಮೀನಿನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನು ಓದಿ: 5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ
ಹುಲಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ದುಬಾರೆ ಆನೆ ಶಿಬಿರದಿಂದ ಎರಡು ಸಾಕಾನೆಗಳನ್ನು ಬಳಸಿಕೊಂಡು ಹುಲಿಗಳ ಸೆರೆಗೆ ಮುಂದಾಗಿದ್ದಾರೆ.
ನುರಿತ ಪಶು ವೈದ್ಯರು ಕೂಡ ಸ್ಥಳದಲ್ಲಿ ಬೀಡುಬಿಟ್ಟಿದ್ದು, ಹುಲಿಗಳಿಗೆ ಅರವಳಿಕೆ ಚುಚ್ಚು ಮದ್ದು ನೀಡಿ ಅವುಗಳನ್ನು ಸೆರೆ ಹಿಡಿಯಲು ಹುಡುಕಾಟ ನಡೆಸಲಾಗುತ್ತಿದೆ.





