ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಧಾರುಣ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ನಡೆದಿದೆ.
ಸ್ವಾಮಿ ಹಾಗೂ ಕೃಷ್ಣಶೆಟ್ಟಿ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಹೋಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





