ಚಾಮರಾಜನಗರ

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ ವೇತನವೂ ದೊರೆಯುತ್ತಿದೆ. ವಿದ್ಯಾರ್ಥಿಗಳು ಈ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಚಾಮರಾಜನಗರ ವಿವಿ ಕುಲಸಚಿವ ಪ್ರೊ. ಕೆ. ಎಂ. ಮಹಾದೇವನ್ ತಿಳಿಸಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಸ್ನಾತಕೋತ್ತರ ಪದವಿ ಪಡೆದ ನಂತರ ಪಿಎಚ್. ಡಿ. ಪದವಿ ಪಡೆಯಲು ಅವಕಾಶವಿದೆ. ಐದು ವರ್ಷಗಳ ಕಾಲ ಇದಕ್ಕಾಗಿ ದೊಡ್ಡ ಮೊತ್ತದ ವಿದ್ಯಾರ್ಥಿ ವೇತನವೂ ದೊರಕುತ್ತದೆ. ಈ ಶೈಕ್ಷಣಿಕ ವರ್ಷದಿಂದ ಪಿಎಚ್. ಡಿ. ಕೋರ್ಸ್ ಆರಂಭಿಸಲಾಗಿದ್ದು ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ಕಾಲೇಜಿನಲ್ಲಿ ಅನೇಕ ವಿದ್ಯಾರ್ಥಿನಿಯರು ಜನಪದ ಗಾಯನ, ಭಕ್ತಿಗೀತೆ, ದೇಶಭಕ್ತಿ ಗೀತೆ, ವಚನ ಗಾಯನ ಹೀಗೆ ಅನೇಕ ಪಠ್ಯೇತರ ಚಟುವಟಿಕೆಗಳಲ್ಲಿ ಬಹುಮಾನ ಪಡೆದಿದ್ದೀರಿ. ಪಠ್ಯ ಕಲಿಕೆ ಎಂದರೆ ವಿದ್ಯಾರ್ಥಿಗಳಿಗೆ ಅದೊಂದು ಕಡ್ಡಾಯ ಹಾಗೂ ಕಠಿಣ ಎಂಬ ಭಾವನೆ ಇದೆ. ಆದರೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಇರುತ್ತದೆ. ನೀವು ಆಸಕ್ತಿಪಡುವ, ನಿಮಗೆ ಸಂತಸ ತರುವ ವಿಷಯಗಳನ್ನೇ ಪಠ್ಯದ ವಿಷಯಗಳನ್ನಾಗಿ ತೆಗೆದುಕೊಂಡಾಗ ಉತ್ತಮ ಸಾಧನೆ ಮಾಡಬಹುದು ಎಂದರು.

ಮೈಸೂರಿನಲ್ಲಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಇದೆ. ಇಲ್ಲಿ ವಿವಿಧ ಪ್ರಕಾರಗಳ ಕಲೆಯ ವಿಷಯಗಳಿದ್ದು ಅದನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು. ಅದರಲ್ಲೇ ಪದವಿ ಪಡೆಯಬಹುದು. ಅದರಲ್ಲೇ ಉದ್ಯೋಗವನ್ನೂ ಪಡೆಯಬಹುದು ಎಂದು ಅವರು ಸಲಹೆ ನೀಡಿದರು.

ಚಾಮರಾಜನಗರ ಜಿಲ್ಲೆ ಎಂದರೆ ಜಾನಪದ ಕಲೆಗಳ ತವರೂರು. ಮಂಟೇಸ್ವಾಮಿ, ಸಿದ್ಧಪ್ಪಾಜಿ, ಮಲೆ ಮಹದೇಶ್ವರ, ಬಿಳಿಗಿರಿರಂಗನಾಥಸ್ವಾಮಿ ಇದೇ ನೆಲದವರು. ಆದರೆ ಇಲ್ಲಿ ಜಾನಪದ ವಿಶ್ವವಿದ್ಯಾಲಯ ಇಲ್ಲದಿರುವ ಕೊರತೆಯಿದೆ. ಜಿಲ್ಲೆಯಲ್ಲಿ ಜಾನಪದ ವಿವಿ ಸ್ಥಾಪಿಸಲು ಜನತೆ ಹೋರಾಟ ನಡೆಸಬೇಕು ಎಂದು ಮಹಾದೇವನ್ ಹೇಳಿದರು.

ಜೆಎಸ್‌ಎಸ್ ಬಿ. ಇಡಿ. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಸಿ. ಬಸವಣ್ಣ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ವ್ಯಾಸಂಗ ಪ್ರಮುಖ ಘಟ್ಟ. ಹೆಣ್ಣು ಮಕ್ಕಳು ಉತ್ತಮ ವ್ಯಾಸಂಗ ಮಾಡಿ, ಉದ್ಯೋಗ ಪಡೆದರೆ ಅದು ಸಮಾಜದ ಮುನ್ನಡೆಗೆ ಕಾರಣವಾಗುತ್ತದೆ. ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೇ, ಉತ್ತಮ ಜೀವನ ರೂಪಿಸಿಕೊಳ್ಳುವುದಕ್ಕೆ ಸಹಾಯಕವಾಗುವ ಜ್ಞಾನ, ಕೌಶಲವನ್ನು ಬೆಳೆಸಿಕೊಳ್ಳಬೇಕು ಎಂದರು.

ಪದವಿಯ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ದತ್ತಿ ಪುರಸ್ಕಾರ, ನಗದು ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಟಿ. ಎಂ. ಮರಿಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜಮೂರ್ತಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಜಮುನಾ, ಗಣಿತ ವಿಭಾಗದ ಮುಖ್ಯಸ್ಥೆ ಅರುಣಾಶ್ರೀ, ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅನುಶ್ರೀ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago