ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ
ಶಿವಮೂರ್ತಿ ಎಂಬುವವರೇ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಲ್ಲಿಪಾಳ್ಯದಿಂದ ತಮಿಳುನಾಡು ರಾಜ್ಯದ ಮಾಕನಪಾಳ್ಯ ಗ್ರಾಮಕ್ಕೆ ಬೈಕಿನಲ್ಲಿ ಹೋಗುವ ವೇಳೆ ಕಾಡಾನೆ ದಾಳಿ ಮಾಡಿದೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.





