Mysore
23
overcast clouds

Social Media

ಮಂಗಳವಾರ, 26 ಮೇ 2026
Light
Dark

ಚಾಮರಾಜನಗರ| ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ

ಚಾಮರಾಜನಗರ : ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ದಿನಳ್ಳಿ ಗ್ರಾಮದ ಸಮೀಪ ಜರುಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗಬಾಳು ಗ್ರಾಮದ ಬಸಪ್ಪನವರ ಮಕ್ಕಳಾದ ಸಿದ್ದಮರಿ, ಗಿರಿಯಪ್ಪ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.

ಘಟನೆ ವಿವರ : ಯರಗಬಾಳು ಗ್ರಾಮದ ಸಿದ್ದಮರಿ ಗಿರಿಯಪ್ಪ ರವರು ತಮಿಳುನಾಡಿನಲ್ಲಿ ನಡೆಯುವ ಆಡಿ ಜಾತ್ರೆಗೆ ತಮ್ಮ ದನಗಳನ್ನು ಮಾರಾಟ ಮಾಡಲು ತೆರಳಿದ್ದರು. ತದನಂತರ ಮಾರಾಟವಾದ ದನಗಳನ್ನು ಅರಣ್ಯದಲ್ಲಿ ಮೇಯಿಸಲು ತೆರಳಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ.

ನಂತರ ಗ್ರಾಮಸ್ಥರು ನೋಡಿ ರಾಮಪುರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಇಬ್ಬರು ಪ್ರಾಣ ಪಾಯದಿಂದ ಪಾರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!