ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2022 ಕೊನೆ ದಿನಾಂಕವಾಗಿದೆ.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 55 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಪಿಯುಸಿ, ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಜ್ಞಾನ ಇರಬೇಕು.
ಪದವಿ: ವಿಜ್ಞಾನ/ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯ. ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆ ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.
ಕಂಪ್ಯೂಟರ್ ನಿರ್ವಹಣಾ ಜ್ಞಾನ: ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯು ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರ ತಕ್ಕದ್ದು. ಟೈಪಿಂಗ್ ಪರೀಕ್ಷೆ ಪ್ರಮಾಣ ಪತ್ರ ಇದ್ದರೂ ಒಳ್ಳೆಯದು.
ವಯೋಮಿತಿ: ಜಿಲ್ಲಾ ನ್ಯಾಯಾಲಯದ ನೇಮಕಾತಿ ನೋಟಿಫಿಕೇಷನ್‌ನಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ(ನವೆಂಬರ್ 30, 2022). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1 ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಕೆಟಗೆರಿ -2, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಸಿಗಲಿದೆ.
ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ವೈವಾ ವೋಸ್ ನಂತರ ವೈಯಕ್ತಿಕ ಸಂದರ್ಶನ.
ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1944 ಇವುಗಳ ಅನುಸಾರವಾಗಿ ಮಾಡಲಾಗುವುದು.
ಟೈಪಿಂಗ್ ಪರೀಕ್ಷೆ: 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 60 ಅಂಕ ಗಳಿಸಬೇಕು. ವೈವಾ ವೋಸಿಯಲ್ಲಿ 20 ಅಂಕಗಳಿಗೆ 10 ಅಂಕ ಪಡೆದುಕೊಳ್ಳಬೇಕು. ಒಟ್ಟಾರೆ 120
70 ಅಂಕ ಗಳಿಸಿದರೆ ಅರ್ಹರಾಗುತ್ತಾರೆ.
ಬೆಂಗಳೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…