ಚಾಮರಾಜನಗರ

ಚಾಮರಾಜನಗರ ಜಿಲ್ಲಾ ಕೋರ್ಟ್ ನೇಮಕಾತಿ 2022: ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ

ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2022 ಕೊನೆ ದಿನಾಂಕವಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 55 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಪಿಯುಸಿ, ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಜ್ಞಾನ ಇರಬೇಕು.

ಪದವಿ: ವಿಜ್ಞಾನ/ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಷಯ. ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳನ್ನು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50 ರಷ್ಟು ಅಂಕಗಳೊಂದಿಗಿನ ವಿದ್ಯಾರ್ಹತೆ ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರತಕ್ಕದ್ದು.

ಕಂಪ್ಯೂಟರ್ ನಿರ್ವಹಣಾ ಜ್ಞಾನ: ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಯು ಪ್ರಧಾನ ಮಾಡುವ ಕಂಪ್ಯೂಟರ್ ಬೇಸಿಕ್ಸ್ ಕೋರ್ಸಿನ ಪ್ರಮಾಣ ಪತ್ರವನ್ನು ಹೊಂದಿರ ತಕ್ಕದ್ದು. ಟೈಪಿಂಗ್ ಪರೀಕ್ಷೆ ಪ್ರಮಾಣ ಪತ್ರ ಇದ್ದರೂ ಒಳ್ಳೆಯದು.

ವಯೋಮಿತಿ: ಜಿಲ್ಲಾ ನ್ಯಾಯಾಲಯದ ನೇಮಕಾತಿ ನೋಟಿಫಿಕೇಷನ್‌ನಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ(ನವೆಂಬರ್ 30, 2022). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1 ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಕೆಟಗೆರಿ -2, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಸಿಗಲಿದೆ.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಶೈಕ್ಷಣಿಕ ಅರ್ಹತೆ, ಬೋಧಕೇತರ ವಿಷಯಗಳಲ್ಲಿನ ಜ್ಞಾನ ಪರಿಶೀಲಿಸಿ ಅಂತಿಮ ಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ. ವೈವಾ ವೋಸ್ ನಂತರ ವೈಯಕ್ತಿಕ ಸಂದರ್ಶನ.

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1944 ಇವುಗಳ ಅನುಸಾರವಾಗಿ ಮಾಡಲಾಗುವುದು.

ಟೈಪಿಂಗ್ ಪರೀಕ್ಷೆ: 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 60 ಅಂಕ ಗಳಿಸಬೇಕು. ವೈವಾ ವೋಸಿಯಲ್ಲಿ 20 ಅಂಕಗಳಿಗೆ 10 ಅಂಕ ಪಡೆದುಕೊಳ್ಳಬೇಕು. ಒಟ್ಟಾರೆ 120
70 ಅಂಕ ಗಳಿಸಿದರೆ ಅರ್ಹರಾಗುತ್ತಾರೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago