Mysore
21
overcast clouds

Social Media

ಮಂಗಳವಾರ, 07 ಜುಲೈ 2026
Light
Dark

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

DK Shivakumar

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಬಂದೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು ವಿಚಾರ. ಇದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

ಇಂದು ರಂಗನಾಥಸ್ವಾಮಿಯ ದೇಗುಲದ ಜೀರ್ಣೋದ್ಧಾರ ಕಾರ್ಯಕ್ರಮ. ಭಖಥ ಭಗವಂತನ ನಡುವೆ ವ್ಯವಹರಿಸುವ ಸ್ಥಳವೇ ದೇವಾಲಯ ಎಂದು ಹೇಳಿದರು.

ಇನ್ನು ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಕುಟುಂಬ ಸದಸ್ಯರಿಗೆ ಕೆಲಸ ಕೊಡಿಸಿರುವ ಸಾರ್ಥಕತೆಯಿದೆ. ನಾವು ಕೊಟ್ಟ ಮಾತನ್ನಿ ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.

ಇನ್ನು ತಮಿಳುನಾಡಿಗೆ 177 ಟಿಎಂಸಿ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್‌ ನಿಯಮ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಕಾನೂನಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

Tags:
error: Content is protected !!