ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ.
ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ. ಕಮಲಮ್ಮ ಎಂಬವವರಿಗೆ ಸೇರಿದ ಕರು ಇದಾಗಿತ್ತು.
ಚಿರತೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಚಿರತೆ ಸೆರೆ ಹಿಡಿಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊನೆಗೆ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿಗೆ ಜನರು ಕ್ಲಾಸ್ ತೆಗೆದುಕೊಂಡು ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.