Mysore
24
scattered clouds

Social Media

ಗುರುವಾರ, 13 ನವೆಂಬರ್ 2025
Light
Dark

ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಜುಲೈ.7ರಂದು ಶ್ರೀ ಬಸವೇಶ್ವರ ಜಯಂತೋತ್ಸವ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇದೇ ಜುಲೈ.7ರಂದು ಎರಡನೇ ವರ್ಷದ ಶ್ರೀ ಬಸವವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಅಂದು ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿರುವ ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿ ಮೆರವಣಿಗೆಗೆ ಚಾಮರಾಜನಗರ ವಿರಕ್ತ ಮಠಾಧ್ಯಕ್ಷರಾದ ಶ್ರೀ ಚನ್ನಬಸವಸ್ವಾಮಿಗಳು ನಂದಿಕಂಬಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ.

ಶ್ರೀ ಬಸವೇಶ್ವರ ಮೂರ್ತಿಯ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ನಂದಿಕಂಬಗಳು ಹಾಗೂ ವಿವಿಧ ಜಾನಪದ ಕಲಾ ತಂಡಗಳು ಭಾಗಿಯಾಗಲಿವೆ. ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಮೆರವಣಿಗೆ ಊರ ತುಂಬೆಲ್ಲಾ ಸಾಗಲಿದೆ.

ಇನ್ನೂ ಬಸವ ಜಯಂತಿ ಅಂಗವಾಗಿ ಸಂಜೆ 7 ಗಂಟೆಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ರಾತ್ರಿ ವೇಳೆಗೆ ಶಿವಕಥೆಯನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಬಸವೇಶ್ವರ ಜಯಂತಿಗೆ ಆಗಮಿಸಿ ಶ್ರೀ ಬಸವೇಶ್ವರರ ಕೃಪೆಗೆ ಪಾತ್ರರಾಗಬಹುದಾಗಿದೆ.

Tags:
error: Content is protected !!