ಚಾಮರಾಜನಗರ

ಚಾಮರಾಜನಗರ ಆಕ್ಸಿಜನ್‌ದುರಂತ: 3 ವರ್ಷವಾದ್ರೂ ನಿಲ್ಲದ ಸಂತ್ರಸ್ತರ ಗೋಳು

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ.

ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, ಹಾಜರಾತಿ, ವೇತನ ಮಂಜೂರು ಮಾಡಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮವೂ ಆಗಿಲ್ಲವೆಂದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ ಕೋವಿಡ್‌ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ದುರಂತ ಇಡೀ ದೇಶದ ಗಮನ ಸೆಳೆದಿತ್ತು. ಒಂದೇ ರಾತ್ರಿ ಆಕ್ಸಿಜನ್‌ಕೊರತೆಯಿಂದ 36 ಮಂದಿ ಸಾವನ್ನಪ್ಪಿದ್ದರು. ಆ ವೇಳೆ ಕಾಂಗ್ರೆಸ್‌ಪಕ್ಷದ ನಾಯಕರು ಬಿಜೆಪಿ ಸರ್ಕಾರ ದ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಭಾರತ್‌ಜೋಡೋ ಯಾತ್ರೆಯ ವೇಳೆ ಸರ್ಕಾರಿ ನೌಕರಿಯ ಭರವಸೆ ಕೊಟ್ಟಿದ್ದರು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ಸರ್ಕಾರ ಅಸ್ತಿತ್ವದಲ್ಲಿದೆ. ಆದ್ರೂ ಕೂಡ ಸಂತ್ರಸ್ತರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ಮಾತ್ರ ಮರೀಚಿಕೆಯಾಗಿಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬಸ್ಥರು ಹೋರಾಟ ಮಾಡುತ್ತಿದ್ದಾರೆ.

ಅಲ್ಲದೇ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌ಅವರು, ಆಕ್ಸಿಜನ್‌ದುರಂತದ ಬಗ್ಗೆ ಮರು ತನಿಖೆ ನಡೆಸುವುದಾಗಿ ಹೇಳಿದ್ದರು. ಆದ್ರೆ ಇಲ್ಲಿಯವರೆಗೂ ಕೂಡ ಮರು ತನಿಖೆ ಮಾತ್ರ ಆರಂಭವಾಗಿಲ್ಲ. ಆಕ್ಸಿಜನ್‌ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಆಗಿಲ್ಲ. ಸರ್ಕಾರ ತಪ್ಪಿತಸ್ಥರನ್ನು ಬಚಾವ್‌ಮಾಡಲು ಮುಂದಾಗಿದ್ಯಾ ಎಂದು ಸಂತ್ರಸ್ತರ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

1 min ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

8 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

12 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

12 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

13 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

14 hours ago