ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು.
ಆನ್‌ಲೈನ್ ಗೇಮ್‌ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಹಲವು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಈ ಪ್ರಕರಣಗಳು ವರದಿಯಾಗುತ್ತಿಲ್ಲ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವುಗಳ ನಿಷೇಧಕ್ಕೆ ಕ್ರಮ ವಹಿಸದೇ ಮೌನವಾಗಿರುವುದು ವಿಪರ್ಯಾಸ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಆನ್‌ಲೈನ್ ಗೇಮ್ ನಿಷೇಧಿಸಬೇಕೆಂದು ಸಮಾಜದ ಪ್ರಜ್ಞಾವಂತರು ಒತ್ತಾಯ ಮಾಡುತ್ತಿದ್ದಾರೆ. ಆದರೂ ಸಂಸದರು, ಶಾಸಕರು ಧ್ವನಿ ಎತ್ತದಿರುವುದು ಖಂಡನೀಯ. ಏ.೨೫ರೊಳಗೆ ಆನ್‌ಲೈನ್ ಗೇಮ್‌ಗಳ ನಿಷೇಧಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗಳ ಮುಂಭಾಗ ಜೂಜಾಟ ಆಡಿಸಲಾಗುವುದು ಎಂದು ಎಚ್ಚರಿಸಿದರು.
ಖಾಸಗಿ ಕಿರು ಹಣಕಾಸು ಸಂಸ್ಥೆಗಳು ಬಲವಂತವಾಗಿ ಸಾಲ ವಸೂಲಿಗಿಳಿದು ಕಿರುಕುಳ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವಿಧೇಯಕ ಅಂಗೀಕರಿಸಿದ್ದು ಸ್ವಾಗತಾರ್ಹ, ಸಾಲ ತೀರಿಸಲು ಸಾಧ್ಯವಾಗದೆ ಮನೆ ಬಿಟ್ಟು ಹೊರ ಹೋಗಿರುವ ಕುಟುಂಬಗಳನ್ನು ವಾಪಸ್ ಅವರ ಗ್ರಾಮಗಳಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಚಾ.ನಗರ ತಾಲ್ಲೂಕು ಅಧ್ಯಕ್ಷ ಮಹೇಶ್ ಹಾಜರಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…