ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು
ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ.
ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು ಮೇಯಿಸಲು ಎಣ್ಣೆಹೊಳೆ ಮಹದೇಶ್ವರ ಬೆಟ್ಟ ತಪ್ಪಲಿಗೆ ಹೊಡೆದುಕೊಂಡು ಹೋಗಿದ್ದರು.
ಮಧ್ಯಾಹ್ನದ ವೇಳೆ ಹುಲಿಯೊಂದು 3 ಮೇಕೆಗಳ ಮೇಲೆ ದಾಳಿ ಮಾಡಿದೆ. ಕೂಡಲೇ ಈ ವೇಳೆ ಜಯರಾಂ ಕಿರುಚಿಕೊಂಡಿದ್ದಾರೆ. ಹುಲಿ 2 ಮೇಕೆಗಳ ಕುತ್ತಿಗೆಯನ್ನು ಕಚ್ಚಿ ರಕ್ತ ಹೀರಿ ಸಾಯಿಸಿ ಸ್ಥಳದಲ್ಲೇ ಬಿಟ್ಟು ಹೋದರೆ, ಮತ್ತೊಂದು ಮೇಕೆಯನ್ನು ಎಳೆದೊಯ್ಯಿತು ಎಂದು ಜಯರಾಂ ತಿಳಿಸಿದ್ದಾರೆ.
ಬಡಗಲಪುರ ಸಮೀಪ ಎಣ್ಣೆಹೊಳೆ ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶವಿದ್ದು, ಈ ಭಾಗದಲ್ಲಿ ಹುಲಿ ಹಾಗೂ ಚಿರತೆ ಓಡಾಡಿಕೊಂಡಿವೆ. ಆಗಾಗ್ಗೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿವೆ. ಸೋಮವಾರ ಹುಲಿಯು ಮೇಕೆಗಳನ್ನು ಸಾಯಿಸಿದೆ. ಅರಣ್ಯ ಇಲಾಖೆಯವರು ಮುನ್ನೆಚ್ಚರಿಕೆಯಾಗಿ ಹುಲಿ ಸೆರೆಗೆ ಕ್ರಮ ವಹಿಸಬೇಕೆದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಸಾಮಾಜಿಕ ವಲಯದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…