ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ ಭಾರೀ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.
ಕಳೆದ ಹಲವು ವರ್ಷಗಳ ನಂತರ ಇಷ್ಟು ಭಾರೀ ಮಳೆ ಸುರಿದಿದ್ದು, ಹಳ್ಳದಲ್ಲಿ ಸುಮಾರು 15 ಅಡಿಗೂ ಹೆಚ್ಚು ನೀರು ಹರಿದು ಬಂದಿದೆ. ನೀರಿನ ರಭಸಕ್ಕೆ ಡ್ಯಾಂನ ಕಲ್ಲಿನ ಗೋಡೆ ಕುಸಿದು ಬಿದ್ದಿದೆ.
12 ವರ್ಷಗಳ ಹಿಂದೆ ಕಟ್ಟಿದ್ದ ಈ ಡ್ಯಾಂನಿಂದ ಸುತ್ತಮುತ್ತಲ ರೈತರಿಗೆ ನೀರಾವರಿಗೆ ಅನುಕೂಲವಾಗಿತ್ತು. ಡ್ಯಾಂ ಕೊಚ್ಚಿ ಹೋಗಿರುವುದರಿಂದ ರೈತರು ಆತಂಕಗೊಂಡಿದ್ದಾರೆ.
ಇನ್ನೂ ಸಾರ್ವಜನಿಕರು ಸ್ಥಳದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪ್ರವಾಹಕ್ಕೆ ಕನಿಷ್ಠ 15 ಅಡಿ ನೀರು ಬಂದಿದ್ದರಿಂದ ಡ್ಯಾಂ ಇಲ್ಲದಂತಾಗಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಹೊಸ ಚೆಕ್ ಡ್ಯಾಂ ನಿರ್ಮಾಣ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…