ಚಾಮರಾಜನಗರ : ಇಲ್ಲಿನ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಯ ಲ್ಲಿ ಜಯಿಸಿ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದವರು.
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಹಾಗೂ ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಅಯೋಜಿಸಲಾಗಿದ್ದ ಪ್ರೌಢಶಾಲಾ ಮಟ್ಟದ ಬಾಲಕಿಯರ ವಿಭಾಗದಲ್ಲಿ ಮೂರು ಸುತ್ತಿನ ಸ್ಪರ್ಧೆಯಲ್ಲಿ ಸೆಣಸಿ ಅಂತಿಮವಾಗಿ ಉಡುಪಿ ಜಿಲ್ಲಾ ತಂಡದ ವಿರುದ್ಧ ಗೆದ್ದಿದ್ದಾರೆ.
ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಾಮರಾಜನಗರ ಜಿಲ್ಲೆಗಳ ಬಾಲಕಿಯರು ಉಡುಪಿ ಹೆಬ್ರಿಯಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ವಿಜೇತರಾದ ಚಾ.ನಗರದ ಬಾಲಕಿಯರಿಗೆ ಚಿನ್ನದ ಪದಕ, ಪ್ರಮಾಣ ಪತ್ರವನ್ನು ಬುಧವಾರ ಪ್ರದಾನ ಮಾಡಿ, ಈ ತಂಡಕ್ಕೆ ಟ್ರೋಫಿ ನೀಡಲಾಗಿದೆ.
ನಗರದ ಚನ್ನೀಪುರಮೋಳೆಯ ಸೇವಾ ಭಾರತಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ರಾಧಿಕಾಗುಪ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ರೇಖಾ, ಬಾಲಕೃಷ್ಣ, ಚೆಸ್ ಕೋಚ್ ಕಿಶೋರ್ ಕುವಾರ್ ಮತ್ತು ಶಾಲಾ ಆಡಳಿತ ಮಂಡಳಿಯವರು ಬಾಲಕಿಯರಿಗೆ
ಅಭಿನಂದನೆ ಸಲ್ಲಿಸಿ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…