ಚಾಮರಾಜನಗರ

ಚೆಸ್: ಐವರು ಬಾಲಕಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಾಮರಾಜನಗರ : ಇಲ್ಲಿನ ಸೇವಾಭಾರತಿ ಪಬ್ಲಿಕ್ ಶಾಲೆಯ  ಐವರು ಬಾಲಕಿಯರು ಚದುರಂಗ ಸ್ಪರ್ಧೆಯಲ್ಲಿ  ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ  ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಯ ಲ್ಲಿ ಜಯಿಸಿ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದವರು.

ವಿದ್ಯಾಭಾರತಿ ಅಖಿಲ ಭಾರತೀಯ  ಶಿಕ್ಷಾ ಸಂಸ್ಥಾನ್ ಹಾಗೂ ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಅಯೋಜಿಸಲಾಗಿದ್ದ ಪ್ರೌಢಶಾಲಾ ಮಟ್ಟದ ಬಾಲಕಿಯರ ವಿಭಾಗದಲ್ಲಿ ಮೂರು ಸುತ್ತಿನ ಸ್ಪರ್ಧೆಯಲ್ಲಿ ಸೆಣಸಿ ಅಂತಿಮವಾಗಿ ಉಡುಪಿ ಜಿಲ್ಲಾ ತಂಡದ ವಿರುದ್ಧ ಗೆದ್ದಿದ್ದಾರೆ.

ದಕ್ಷಿಣ ಕನ್ನಡ, ಬೆಂಗಳೂರು, ಉಡುಪಿ, ಚಾಮರಾಜನಗರ ಜಿಲ್ಲೆಗಳ ಬಾಲಕಿಯರು ಉಡುಪಿ  ಹೆಬ್ರಿಯಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ವಿಜೇತರಾದ ಚಾ.ನಗರದ ಬಾಲಕಿಯರಿಗೆ ಚಿನ್ನದ ಪದಕ, ಪ್ರಮಾಣ ಪತ್ರವನ್ನು ಬುಧವಾರ  ಪ್ರದಾನ  ಮಾಡಿ, ಈ ತಂಡಕ್ಕೆ ಟ್ರೋಫಿ ನೀಡಲಾಗಿದೆ.
ನಗರದ ಚನ್ನೀಪುರಮೋಳೆಯ ಸೇವಾ ಭಾರತಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ರಾಧಿಕಾಗುಪ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ರೇಖಾ, ಬಾಲಕೃಷ್ಣ, ಚೆಸ್ ಕೋಚ್ ಕಿಶೋರ್ ಕುವಾರ್ ಮತ್ತು ಶಾಲಾ ಆಡಳಿತ ಮಂಡಳಿಯವರು ಬಾಲಕಿಯರಿಗೆ
ಅಭಿನಂದನೆ ಸಲ್ಲಿಸಿ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago