Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಸಾರ್ವಜನಿಕ ಕಾಮಗಾರಿಗಳಿಗೆ ನಾಗರಿಕರ ಸಹಕರ ಮುಖ್ಯ: ಶಾಸಕ ಎಂ ಆರ್‌ ಮಂಜುನಾಥ್‌

ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಹೂಗ್ಯಂ, ರಾಮಾಪುರ, ಕೌದಳ್ಳಿ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ 9 ಕೋಟಿ ಅಂದಾಜು ವೆಚ್ಚದಲ್ಲಿ ಪಂಚಾಯತ್ ರಾಜ್ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಬೂದು ನೀರು ನಿರ್ವಹಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪೈಲೆಟ್ ಪ್ರಾಜೆಕ್ಟ್ ಯೋಜನೆಗೆ ನಮ್ಮ ತಾಲ್ಲೂಕಿನ 3 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಮುಖ್ಯವಾಗಿ ಚರಂಡಿ ಮತ್ತು ಸಿಕ್ ಫಿಟ್ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚರಂಡಿ ನೀರನ್ನು ಸ್ವಚ್ಛಗೊಳಿಸಿ ಕೆರೆಗಳಿಗೆ ನೀಡುವುದಾಗಿದೆ. ಇದರಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುಲು ಸಹಕಾರಿಯಾಗುತ್ತದೆ . ಇದೊಂದು ವೈಜ್ಞಾನಿಕ ತಳಹದಿಯ ಮೇಲೆ ಅನುಷ್ಠಾನಗೊಳಿಸುತ್ತಿರುವ ಯೋಜನೆಯಾಗಿದೆ ಎಂದು ತಿಳಿಸಿದರು.

ಸರ್ಕಾರದ ವಿನೂತನ ಕಾರ್ಯಕ್ರಮವು ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ವರದಾನವಾಗಿದೆ. ಜಿಲ್ಲೆಯಲ್ಲಿ 11 ಗ್ರಾಮಗಳು ಆಯ್ಕೆಯಾಗಿದ್ದು ಹನೂರು ತಾಲ್ಲೂಕಿನ 3 ಗ್ರಾಮಗಳನ್ನು ಅಗತ್ಯಕ್ಕೆ ಅನುಸಾರವಾಗಿ ತಾಲೂಕಿನಲ್ಲಿ ಮೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಭಾಗಕ್ಕೆ ಇಂತಹ ಯೋಜನೆಗಳು ತುಂಬಾ ಅಗತ್ಯವಾಗಿದೆ.

ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಈ ಯೋಜನೆಯನ್ನು ಇತರೆ ಗ್ರಾಮಗಳಿಗೆ ವಿಸ್ತರಿಸುವಂತೆ ಆಗಬೇಕು. ಅದಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರು, ಸಾರ್ವಜನಿಕರು ತಮ್ಮ ಸ್ವಪ್ರತಿಷ್ಠೆ ಬಿಟ್ಟು ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಮಹಾದೇವ ಪ್ರಸಾದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಉಮೇಶ್, ಎಡಿ ರವೀಂದ್ರ, ಪಿಡಿಒ ಪುಷ್ಪಲತಾ, ಗ್ರಾ.ಪಂ.ಅಧ್ಯಕ್ಷೆ ಮುರುಗೇಶ್ವರಿ ರಾಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ , ಉಪಾಧ್ಯಕ್ಷೆ ರಾಜಮ್ಮ, ಸದಸ್ಯರುಗಳಾದ ಚಿಕ್ಕಯ್ಯ, ವೀರೇಶ್, ಪಳನಿಸ್ವಾಮಿ,ರಾಜಣ್ಣ, ರಾಜ,ರವಿಕುಮಾರ್, ಸುಬ್ಬಮ್ಮ, ಪೆರುಮಾಳ್,  ಮುಖಂಡರುಗಳಾದ ಮಂಜೇಶ್ ಗೌಡ,ಯರಂಬಾಡಿ ಹುಚ್ಚಯ್ಯ, ಮಾಣಿಕ್ಯ, ಮುನಿಯಪ್ಪ, ಅರುಳ್ ಸ್ವಾಮಿ, ಶ್ರೀರಂಗಂ, ವೆಂಕಟರಾಮ,ಸುಬ್ರಮಣಿ, ಮಹದೇವ್, ಅತಿಕ್ ಕೌದಳ್ಳಿ ನಭಿ ,ರಾಚಪ್ಪ, ಕೆಂಪಲಿಂಗ,ಬಾಬು,ಸಾರ್ವಜನಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags: