ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಸುಮಾರು ಹತ್ತು ವರ್ಷದ ಹುಲಿಯೊಂದು ಸೆರೆಯಾಗಿರುವ ಘಟನೆ ನಡೆದಿದೆ.
ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಸಂಚಾರ ಕಂಡುಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ಹುಲಿ ಬೋನಿಗೆ ಬಿದ್ದಿರುವ ವಿಷಯ ತಿಳಿದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ಹಲವು ದಿನಗಳಿಂದಲೂ ಹುಲಿ ದಾಳಿಯಿಂದಾಗಿ ಜಾನುವಾರುಗಳು ಬಲಿಯಾಗಿದ್ದು ಜನರಲ್ಲಿಯೂ ಆತಂಕ ಮೂಡಿಸಿತ್ತು ಜನರು ಜಮೀನುಗಳತ್ತ ಹೋಗಲು ಹಾಗೂ ಜಾನುವಾರುಗಳನ್ನು ಮೇಯಿಸಲು ತೆರಳಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು, ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಲಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಮೇಲಾಧಿಕಾರಿಗಳ ಸೂಚನೆ ನಿಡಿದರೆ ಪುನರ್ವಸತಿ ಕೇಂದ್ರಕ್ಕೆ ಬಿಡುವುದ ಇಲ್ಲವೇ ಎಂಬ ಬಗ್ಗೆ ಚಿಂತಿಸಲಾಗುವುದು ಎಂದು ಕುಂದಕೆರೆ ಅರಣ್ಯ ವಲಯಾಧಿಕಾರಿ ನಾಗೇಂದ್ರ ನಾಯಕ್ ತಿಳಿಸಿದರು.
ಹುಲಿ ಸೆರೆಯಿಂದಾಗಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆ ಸಾರ್ವಜನಿಕರು ಸ್ಥಳದಲ್ಲಿ ಅನಗತ್ಯವಾಗಿ ಗುಂಪುಗೂಡದಂತೆ ಹಾಗೂ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅರಣ್ಯಾಧಿಕಾರಿಗಳು ಸ್ಥಳೀಯರಿಗೆ ಮನವಿ ಮಾಡಿದರು.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…