Mysore
24
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿದ್ದಾರೆ.

ಕೊಳ್ಳೇಗಾಲದ ಪ್ರತಿಷ್ಠಿತ ವಾಸವಿ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲೆ ಮಹದೇಶ್ವರ ಬೆಟ್ಟದಲ್ಲಿ ಒಂದು ವಾರಗಳ ಕಾಲ ಎನ್ಎಸ್ಎಸ್ ಶಿಬಿರ ಆಯೋಜನೆ ಮಾಡಿ ಫೆಬ್ರವರಿ ಒಂದರಿಂದ ಮಲೆ ಮಹದೇಶ್ವರ ಬೆಟ್ಟದ ವಿವಿಧ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರ ತಂಡ ಮಲೆ ಮಹದೇಶ್ವರ ಬೆಟ್ಟದ ಪಾದಯಾತ್ರಿಕರ ಮಾರ್ಗ ಕಲ್ಯಾಣಿ ದೊಡ್ಡಕೆರೆ ಮೈದಾನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಆವರಣ ಸಾಲೂರು ಮಠದ ರಸ್ತೆ, ಹಳೆ ಅಂತರಗಂಗೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛತೆ ಮಾಡಿದ್ದಾರೆ.

ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಮಾತನಾಡಿ ಕೊಳ್ಳೇಗಾಲ ವಾಸವಿ ವಿದ್ಯಾಸಂಸ್ಥೆಯ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸಾವಿರಾರು ಭಕ್ತಾದಿಗಳು ಸ್ನಾನ ಮಾಡುವ ಕಲ್ಯಾಣಿ, ದೇವರ ತೆಪ್ಪೋತ್ಸವ ನಡೆಯುವ ದೊಡ್ಡಕೆರೆ, ಅಂತರಗಂಗೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತೆ ಮಾಡುತ್ತಿದ್ದಾರೆ. ಮುಂದಿನ ವಾರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಇರುವುದರಿಂದ ಭಕ್ತರಿಗೆ ಹೆಚ್ಚಿನ ಅನುಕೂಲವಾಗಿದೆ. ಭಕ್ತರು ಸಹ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ತಾವು ಬಳಸುವ ಪದಾರ್ಥಗಳನ್ನು ಬಿಸಾಡದೆ ನಿಗದಿತ ಸ್ಥಳದಲ್ಲಿ ಹಾಕುವ ಮೂಲಕ ಪರಿಸರವನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು. ಬೇರೆ ಭಕ್ತಾದಿಗಳು ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಕಸ ಕಡ್ಡಿಗಳನ್ನು ಬಿಸಾಡುತ್ತಿದ್ದರೆ ಅವರಿಗೆ ಜಾಗೃತಿ ಮೂಡಿಸಬೇಕು ಎಂದರು.

ಈ ವೇಳೆ ವಾಸವಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರು ಸಹ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.

Tags:
error: Content is protected !!