ಹನೂರು : ತಾಲೂಕಿನ ರಾಮನಗುಡ್ಡ ಜಲಾಶಯದ ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿರುವ 98 ಎಕರೆ ಜಾಗವನ್ನು ಒತ್ತುವರಿ ತೆರವು ಮಾಡಿ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನ ಗುಡ್ಡ ಜಲಾಶಯದ ಸರ್ವೆ ಕಾರ್ಯ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ರಾಮನಗುಡ್ಡ ಜಲಾಶಯದ ಅಕ್ಕಪಕ್ಕದ ರೈತರು ಹಲವಾರು ವರ್ಷಗಳಿಂದ ಸುಮಾರು 98 ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ.
ಈಗಾಗಲೇ ಹಲವು ದೂರುಗಳು ಬಂದಿದ್ದು ಒತ್ತುವರಿ ತೆರವು ಮಾಡಲು ಭೂಮಾಪನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಜಂಟಿ ಸರ್ವೆ ನಡೆಸಲಾಗುತ್ತಿದೆ. ನಂತರ ಜಲಾಶಯದ ಗಡಿ ರೇಖೆ ಗುರುತಿಸಿ ಒತ್ತುವರಿ ಜಮೀನನ್ನು ತೆರವು ಮಾಡಿದ ನಂತರ ನೀರು ತುಂಬಿಸುವ ಯೋಜನೆಗೆ ಸಹಕರಿಸಬೇಕು ಎಂದು ತಿಳಿಸಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೈತರಿಗೆ ನೀರಾವರಿ ಯೋಜನೆಯನ್ನು ಕಲ್ಪಿಸಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಈ ಒಂದು ಯೋಜನೆ ಯಶಸ್ವಿಯಾಗಲು ರೈತರು ಹಾಗೂ ಸ್ಥಳೀಯರ ಸಹಕಾರ ಅತಿ ಮುಖ್ಯವಾಗಿದೆ ಎಂದರು. ಈಗಾಗಲೇ ಕಾವೇರಿ ನದಿಯಿಂದ ರಾಮನಗುಡ್ಡ ಜಲಾಶಯಕ್ಕೆ ನೀರನ್ನು ಹರಿಸಲು ಅಗತ್ಯ ಕ್ರಮ ವಹಿಸಲಾಗಿದೆ 2.5 ಕೋಟಿ ವೆಚ್ಚದಲ್ಲಿ ಬಾಕಿ ಉಳಿದಿರುವ 1.45 ಕಿ.ಲೋ ಪೈಪ್ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ ಕೆರೆಗೆ ನೀರು ತುಂಬಿಸಲು ಕ್ರಮ ವಹಿಸಲಾಗುತ್ತಿದೆ. ರೈತರ ಬಹುದಿನಗಳ ಕನಸು ನನಸಾಗುವ ದಿನ ಕೆಲವೇ ದಿನಗಳಲ್ಲಿ ಬರಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ರೈತ ಮುಖಂಡರಲ್ಲಿ ಹರ್ಷ ರಾಮನ ಗುಡ್ಡ ಜಲಾಶಯ ನಿರ್ಮಾಣ ಮಾಡಿದ ದಿನದಿಂದ ಯಾವೊಬ್ಬ ಜನಪ್ರತಿನಿಧಿಗಳು ಒತ್ತುವರಿ ಜಮೀನನ್ನು ತೆರೆವು ಮಾಡಲು ಮುಂದಾಗಿರಲಿಲ್ಲ ಆದರೆ ಶಾಸಕ ಮಂಜುನಾಥ್ ರವರು ಕೊಟ್ಟ ಭರವಸೆಯಂತೆ ಭೂಮಾಪನ ಇಲಾಖೆಯವರನ್ನು ಕರೆತಂದು ಗಡಿ ಗುರುತಿಸಿ ಒತ್ತುವರಿ ತೆರವು ಮಾಡಲು ಮುಂದಾಗಿದ್ದಾರೆ.
ಈಗಾಗಲೇ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ನೀರು ಹರಿದು ಬರಲಿದೆ ಇದರಿಂದ ಹಲವಾರು ವರ್ಷಗಳಿಂದ ಸ್ಥಗಿತವಾಗಿದ್ದ ಕಾಮಗಾರಿ ವೇಗ ಪಡೆದುಕೊಂಡಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಪರಿಶೀಲನೆ ವೇಳೆ ಭೂ ಮಾಪನ ಇಲಾಖೆಯ ಎಸ್ ಇ ಚೇತನ್ ಕುಮಾರ್ ನೀರಾವರಿ ಇಲಾಖೆಯ ಎಇಇ ಅಭಿಲಾಶ್ ಜೆ.ಇ ಪ್ರತಾಪ್ ಸರ್ವೆ ಇಲಾಖೆಯ ಸಿಬ್ಬಂದಿಗಳು ಹಾಗೂ ರೈತ ಮುಖಂಡರುಗಳು ಹಾಜರಿದ್ದರು .
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…