ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಸಭೆಯಲ್ಲಿ ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ನಿರ್ಣಯ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು





