ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಸಭೆಯಲ್ಲಿ ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ನಿರ್ಣಯ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು

ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

3 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

3 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

3 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

5 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

5 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

6 hours ago