ಚಾಮರಾಜನಗರ

ಸಿದ್ದರಾಮಯ್ಯ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕವಾಡ್ತಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ ಕಿಡಿಕಾರಿದ್ದಾರೆ.

ಸಿಎಂ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ಭರವಸೆಯಿಂದ ಬಹುದೂರದಿಂದ ಆಯಾಸಗೊಂಡು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಜನಸಾಮಾನ್ಯರು ಸಿದ್ದರಾಮಯ್ಯರಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ, ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು ದುಮ್ಮಾನಗಳಿಗೆ ಕಾಂಗ್ರೆಸ್‌ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ.

ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಸಿಎಂ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ. ಇಂತಹ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ, ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ. ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ಎಂದು ಪ್ರಶ್ನಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

48 mins ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

11 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

14 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

14 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

14 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

14 hours ago