Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಆಂದೋಲನ ದಿನಪತ್ರಿಕೆಯ ವರದಿ ಪ್ರದರ್ಶಿಸಿ ಗೃಹಲಕ್ಷ್ಮೀ ಪ್ರಾಮುಖ್ಯತೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರಿಂದು ಆಂದೋಲನ ದಿನಪತ್ರಿಕೆಯ ವರದಿ ಪ್ರದರ್ಶಿಸಿ ಗೃಹಲಕ್ಷ್ಮೀ ಯೋಜನೆಯ ಪ್ರಾಮುಖ್ಯತೆಯನ್ನು ಜನತೆಗೆ ತಿಳಿಸಿದ್ದಾರೆ

ಚಾಮರಾಜನಗರದಲ್ಲಿ ನೂತನ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದ “ಗೃಹಲಕ್ಷ್ಮೀಯ ಕಾಸಿನಿಂದ ಬಂಗಾರದಂತಹ ಬೆಳೆ” ಎಂಬ ವರದಿಯನ್ನು ಪ್ರದರ್ಶಿಸಿ ಯೋಜನೆಯ ಮಹತ್ವ ತಿಳಿಸಿದರು.

ಬಳಿಕ ಮಾತನಾಡಿದ ಅವರು, ಬಡಜನರಿಗೆ ಅನುಕೂಲವಾಗಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮ ಸರ್ಕಾರ ಯಾವಾಗಲೂ ಬಡವರ ಪರ ಕೆಲಸ ಮಾಡುತ್ತದೆ. ಯಾವುದೇ ಊಹಾಪೋಹಗಳಿಗೆ ನೀವು ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದರು.

ಈ ಮೂಲಕ ಮತ್ತೆ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

 

Tags: