ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರಿಂದು ಆಂದೋಲನ ದಿನಪತ್ರಿಕೆಯ ವರದಿ ಪ್ರದರ್ಶಿಸಿ ಗೃಹಲಕ್ಷ್ಮೀ ಯೋಜನೆಯ ಪ್ರಾಮುಖ್ಯತೆಯನ್ನು ಜನತೆಗೆ ತಿಳಿಸಿದ್ದಾರೆ
ಚಾಮರಾಜನಗರದಲ್ಲಿ ನೂತನ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದ “ಗೃಹಲಕ್ಷ್ಮೀಯ ಕಾಸಿನಿಂದ ಬಂಗಾರದಂತಹ ಬೆಳೆ” ಎಂಬ ವರದಿಯನ್ನು ಪ್ರದರ್ಶಿಸಿ ಯೋಜನೆಯ ಮಹತ್ವ ತಿಳಿಸಿದರು.
ಬಳಿಕ ಮಾತನಾಡಿದ ಅವರು, ಬಡಜನರಿಗೆ ಅನುಕೂಲವಾಗಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಮ್ಮ ಸರ್ಕಾರ ಯಾವಾಗಲೂ ಬಡವರ ಪರ ಕೆಲಸ ಮಾಡುತ್ತದೆ. ಯಾವುದೇ ಊಹಾಪೋಹಗಳಿಗೆ ನೀವು ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಮತ್ತೆ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…