ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು.
ಇಂದು ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧ ಗಂಟೆಗೆ ಸಿಎಂ ನೇತೃತ್ವದಲ್ಲಿ ಆರಂಭವಾಗಬೇಕಿದ್ದ ಕಾರ್ಯಕ್ರಮ ಸಿಎಂ ಬಾರದ ಕಾರಣ ಮಧ್ಯಾಹ್ನವಾದರೂ ಶುರುವಾಗಲೇ ಇಲ್ಲ. ಇದರ ಪರಿಣಾಮವಾಗಿ ೮ ವಿಧಾನಸಭಾ ಕ್ಷೇತ್ರಗಳಿಂದ ಚಾಮರಾಜನಗರಕ್ಕೆ ಬಂದಿದ್ದ ಸಾವಿರಾರು ಮಂದಿ ಸುಸ್ತಾಗಿಹೋದರು.