ಸಿಎಂ ಸಿದ್ದರಾಮಯ್ಯರಿಂದ ಚಾಮರಾಜನಗರ ಜಿಲ್ಲಾ ಪ್ರವಾಸ ; ಅಭಿನಂದನಾ ಸಮಾರಂಭದಲ್ಲಿ ಭಾಗಿ

ಚಾಮರಾಜನಗರ : ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಚಾಮರಾಜನಗರದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಬೆಳಿಗ್ಗೆ ೧೦ ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ ಬಳಿಕ ಚಾಮರಾಜನಗರದತ್ತ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಸಂಜೆ ಮೈಸೂರಿಗೆ ವಾಪಸ್‌ ಆಗಿ ವಾಸ್ತವ್ಯಹೂಡಲಿದ್ದಾರೆ.

ಇನ್ನು ಈ ಸಮಾರಂಭದಲ್ಲಿ ೩೦.೦೦೦ ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ ಪರಮೇಶ್ವರ್‌, ಜಿಲ್ಲಾ ಉಸ್ತುವಾರಿ ಸಚಿ ಕೆ.ವೆಂಕಟೇಶ್‌, ಎಸ್‌ ಸಿ ಮಹದೇವಪ್ಪ, ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌ ಹಾಗೂ ಸಂಸದ ಸುನಿಲ್‌ ಬೋಸ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಇನ್ನು ಸಿದ್ದರಾಮಯ್ಯ ಪ್ರತಿನಿಧಿಸುವ  ವರುಣ ಕ್ಷೇತ್ರವೂ ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡಲಿದೆ.