Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗೋಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು.

ಇವರಿಗೆ ಜೊತೆಯಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ ಮಾದು, ರವಿಶಂಕರ್, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಮುಖಂಡರು ಮತ್ತು ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ