Mysore
17
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ನ. 20ಕ್ಕೆ ಚಾ.ನಗರಕ್ಕೆ ಸಿಎಂ : ರಾಜ್ಯ ಸಹಕಾರ ಸಪ್ತಾಹ ಸಮಾರೋಪದಲ್ಲಿ ಭಾಗಿ ; ಸುಮಾರು 30ಸಾವಿರ ಜನ ಸೆರುವ ನಿರೀಕ್ಷೆ

ಚಾಮರಾಜನಗರ : ನಗರದಲ್ಲಿ ಇದೇ ನ.20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ನಡೆಸಲು ನಿರ್ಧರಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕೆ.ಎಂ.ಎಫ್‌ನ ವ್ಯವಸ್ಥಾಪಕ ನಿದೇಶಕ ಬಿ.ಶಿವಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕುದೇರಿನಲ್ಲಿರುವ ಚಾಮುಲ್‌ ಕಚೇರಿಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು ಇದರ ಸಮಾರೋಪ ಸಮಾರಂಭ ವನ್ನೂ ಅವರೇ ನಗರದಲ್ಲಿ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಇದನ್ನೂ ಓದಿ:-ಅಂಬಾನಿ ಒಡೆತನದ 3 ಸಾವಿರ ಕೋಟಿ ಮೌಲ್ಯದ ಆಸ್ತಿ ಇಡಿ ವಶಕ್ಕೆ

ಮೈಸೂರು ವಿಭಾಗದಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಸುಮಾರು 30 ಸಾವಿರ ಜನರು ಸೇರುವ ನಿರೀಕ್ಷೆ ಇದ್ದು ಸಿದ್ಧತೆಗಾಗಿ 10 ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಯವರು ಅವರಿಗೆ ಕೊಟ್ಟಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೆಕು ಎಂದು ಹೇಳಿದರು.

ವಸ್ತು ಪ್ರದರ್ಶನ ವಿಷಯ ತಜ್ಞರಿಂದ ಉಪನ್ಯಾಸ ಮೊದಲಾದ ಕಾರ್ಯಕ್ರಮಗಳು ನಡೆಯುತ್ತವೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೆಕು ಎಂದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ,ಲೋಕಸಭಾ ಸದಸ್ಯ ಸುನಿಲ್ ಬೋಸ್ ,ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರುಗಳು ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಪೂರ್ವಭಾವಿಸಭೆಯಲ್ಲಿ ರಾಜ್ಯ ಹಾಲು ಮಹಾಮಂಡಳ ಆಡಳಿತಾಧಿಕಾರಿ ಟಿ. ಹೆಚ್.ಎಂ. ಕುಮಾರ್, ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಕೆಂದ್ರ ಬ್ಯಾಂಕ್‌ ಆಡಳಿತಾಧಿಕಾರಿ ಎಂ. ಆಶಾ, ಚಾಮುಲ್ ಅಧ್ಯಕ್ಷ ಎಂ ನಂಜುಂಡಸ್ವಾಮಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್ ಎಸ್. ನಂಜುಂಡ ಪ್ರಸಾದ್, ಮೈಮುಲ್ ಅಧ್ಯಕ್ಷ ಈರೇಗೌಡ, ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!