ತಿ.ನರಸೀಪುರ : ಹೆಚ್ಚು ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿಗಳು ಬಹಳ ಅನುಭವಿಯಾಗಿದ್ದು, ಬಹಳ ಚಾಲಾಕಿನಿಂದ ಒಂದೆಡೆ ಗ್ಯಾರಂಟಿ ಕೊಟ್ಟು, ಮತ್ತೊಂದು ಕಡೆ ಬೆಲೆ ಏರಿಸಿ ಕೈಯಿಂದ ದುಡ್ಡು ಕಿತ್ತುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.
ತಾಲ್ಲೂಕಿನ ಮೂಗೂರು ಗ್ರಾಮದಲ್ಲಿ ಸೋಮವಾರ ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಪರ ಚುನಾವಣಾ ಪ್ರಚಾರ ಭಾಷಣ ಮಾಡಿ ಮಾತನಾಡಿದರು.
ಎಸ್‌ಸಿ, ಎಸ್‌ಟಿಗೆ ಮೀಸಲಿಟ್ಟ ಅನುದಾನ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿ, ಆ ಸಮುದಾಯಗಳ ಅಭಿವೃದ್ಧಿ ಕುಂಠಿತಗೊಂಡಿದೆ. ಒಂದೆಡೆ ಉಚಿತ ನೀಡುವುದಾಗಿ ಹೇಳಿ ಮತ್ತೊಂದೆಡೆ ಹೆಚ್ಚುವರಿಯಾಗಿ ವಿದ್ಯುತ್ ಬಿಲ್ ವಸೂಲ್ ಮಾಡಲಾಗುತ್ತದೆ.
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಕಾಣುತ್ತಿದೆ. ದೇಶದ ಜನತೆ ಈಗ ಮತ್ತೆ ಮೋದಿಯವರನ್ನು ಪ್ರಧಾನಿಯಾಗಲು ಬಯಸಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರು ಕೂಡ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವಂತೆ ಕರೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಭಾಗದ ಜನರು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎಸ್.ಬಾಲರಾಜ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಮೋದಿಯವರಿಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ ಎಂದು ಹೇಳಿದರು.
ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬರಗಾಲ ಬಂದಿದೆ. ರೈತರ ನೋವುಗಳಿಗೆ ಸರ್ಕಾರ ಸ್ಪಂದಿಸಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಮುಖ್ಯಮಂತ್ರಿಗಳು ವಿಫಲರಾಗಿದ್ದು, ರೈತರು ಕಣ್ಣೀರಿಡುವ ಪರಿಸ್ಥಿತಿಗೆ ತಂದಿಟ್ಟಿದ್ದಾರೆ ಎಂದರು.
ಸರ್ಕಾರ ಇದ್ದೂ ಸತ್ತಿಂತಿದೆ. ಭಿಕ್ಷುಕರಂತೆ ರೈತರಿಗೆ ೨ ಸಾವಿರ ರೂ. ಪರಿಹಾರ ನೀಡಿದೆ. ಬಿಜೆಪಿ ಅವಧಿ ವೇಳೆ ಟ್ರಾನ್ಸ್ ಫಾರ್ಮರ್‌ಗೆ ೨೫ ಸಾವಿರ ರೂ. ಕಟ್ಟಬೇಕಿತ್ತು. ಇಂದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ೩ ಲಕ್ಷ ರೂ. ಕಟ್ಟಬೇಕು. ನೋಂದಣಿ ಮಾಡಿಸಲು ಹೆಚ್ಚುವರಿ ಹಣ ಪಾವತಿಸಬೇಕಿದೆ.
ಅನುಭವಿ ಮುಖ್ಯಮಂತ್ರಿಗಳಿದ್ದರೂ ರಾಜ್ಯ ಸರ್ಕಾರ ಇಂದು ಜನರ ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಕೊಲೆಗಳಾಗುತ್ತಿದೆ. ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ಆರೋಪಿಸಿದರು.
ಅಭ್ಯರ್ಥಿ ಎಸ್.ಬಾಲರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಯೊಬ್ಬ ಭಾರತೀಯನಿಗೂ ಶಕ್ತಿ ತುಂಬುತ್ತಿದ್ದಾರೆ. ೨೦೪೭ಕ್ಕೆ ವಿಕಸಿತ ಭಾರತಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ. ಅಂತಹ ಪ್ರಧಾನಿಯವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡಿದೆ. ಇಂತಹ ಸರ್ಕಾರದ ವಿರುದ್ಧ ಮತ ಚಲಾಯಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಈ ಕ್ಷೇತ್ರದಿಂದ ನನಗೆ ಹೆಚ್ಚಿನ ಮತ ನೀಡುವಂತೆ ಅವರು ಮನವಿ ಮಾಡಿದರು.
ಮಾಜಿ ಶಾಸಕ ಅಶ್ವಿನ್ ಕುವಾರ್,ಹನೂರು ಶಾಸಕ ಮಂಜುನಾಥ್, ಡಾ.ರೇವಣ್ಣ, ಮೈಸೂರು ಜಿಲ್ಲಾ ಗ್ರಾವಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮೈಮೂಲ್ ನಿರ್ದೇಶಕ ಅಶೋಕ್,ಜೆಡಿಎಸ್ ಕ್ಷೇತ್ರಾ ಧ್ಯಕ್ಷ ಚಿನ್ನಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಶಿವಕುವಾರ್,ಮೈಸೂರು ಜಿಲ್ಲಾ ಗ್ರಾವಾಂತರ ಬಿಜೆಪಿ ಪ್ರಧಾನ ಕಾಂರ್ುದರ್ಶಿ ಎನ್.ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಹೆಳವರಹುಂಡಿ ಸಿದ್ದಪ್ಪ, ಗೂಳಿ ಮಹೇಶ್ ಪುರಸಭಾ ಸದಸ್ಯ ಕಿರಣ್, ವಿಚಾರವಾದಿ ಪ್ರಭುಸ್ವಾಮಿ, ತಾ.ಪಂ.ವಾಜಿ ಸದಸ್ಯ ಚಂದ್ರಶೇಖರ್, ಎಂ. ಶಿವಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ರಘು ಕೌಟಿಲ್ಯ, ಜಿ.ಪಂ. ವಾಜಿ ಸದಸ್ಯ ಸದಾನಂದ, ಕೆ.ಸಿ.ಲೋಕೇಶ್ ನಾುಂಕ್,ುುಂವ ಮೋರ್ಚಾ ಜಿಲ್ಲಾಧ್ಯಕ್ಷ ಸಾವ್ರಾಟ್, ಗ್ರಾ.ಪಂ. ಉಪಾಧ್ಯಕ್ಷ ಕೈುಂಂಬಳ್ಳಿ ಅಶೋಕ್, ತೊಟ್ಟುವಾಡಿ ಅನಿಲ್ ಕುವಾರ್, ಬೆನಕನಹಳ್ಳಿ ವಿಜುಂಕುವಾರ್, ದಾಂನಂದ್ ಪಟೇಲ್ ಮತ್ತಿತರರು ಹಾಜರಿದ್ದರು.