ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಕ್ತಿ ಯೋಜನೆಯಲ್ಲಿ ದೋಖಾ ನಡೆದಿರುವ ಶಂಕೆ ವ್ಯಕ್ತವಾಗಿದೆ.
ರಾಜ್ಯ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲೂ ದೋಖಾ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಫ್ರೀ ಬಸ್ ಟಿಕೆಟನ್ನು ಪುರುಷರಿಗೆ ವಿತರಿಸಿರುವ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಕಂಡಕ್ಟರ್ ವಿರುದ್ಧ ದೂರು ನೀಡಿದ್ದಾರೆ.
ಕಂಡಕ್ಟರ್‌ಗಳು ಹಣ ಪಡೆದು ಪುರುಷರಿಗೆ ಮಹಿಳೆಯರ ಫ್ರೀ ಟಿಕೆಟ್ ನೀಡಿದ್ದಾರೆ ಎನ್ನಲಾಗಿದ್ದು, ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ವಿದ್ಯಾರ್ಥಿಗಳು ದೂರು ಕೊಟ್ಟಿದ್ದಾರೆ.
ಕಂಡಕ್ಟರ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿರುವ ವಿದ್ಯಾರ್ಥಿಗಳು ಮುಂದೆ ಈ ರೀತಿಯ ಘಟನೆಗಳು ಆಗದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.