ಗುಂಡ್ಲುಪೇಟೆ : ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಲ್ಲೂಕಿನ ಹಂಗಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ 7:30 ರ ಸಮಯದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸವಾರ ಸಾವಿಗೀಡಾಗಿದ್ದಾರೆ.
ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಸಂಜಯ್ (20) ಸಾವಿಗೀಡಾದವರು. ಎದುರಿನಿಂದ ಬರುತ್ತಿದ್ದ ಬೈಕ್ ಸವಾರರಾದ ತಾಲ್ಲೂಕಿನ ಹಂಗಳ ಗ್ರಾಮದ ಆನಂದ್ ಮತ್ತು ಸಿದ್ದೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





