ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ರದ್ದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದವರು ಹಣ ಬಿಡುಗಡೆಯಾಗದಿದ್ದರೆ ಶಾಸಕರ ಹೆಸರು ಬಹಿರಂಗಪಡಿಸುವುದಾಗಿ ಹೇಳುತ್ತಿದ್ದಾರೆ. ಒಂದು ವೇಳೆ ಪುಟ್ಟರಂಗಶೆಟ್ಟಿ ಕಮಿಷನ್ ಕೇಳುತ್ತಿದ್ದಾರೆ ಎಂದಾದರೆ ಅದನ್ನು ಬಹಿರಂಗವಾಗಿ ಹೇಳಬೇಕು. ಹಾಗೆ ಹೇಳಿದಾಗಲೇ ಸತ್ಯಾಸತ್ಯತೆ ಗೊತ್ತಾಗುತ್ತದೆ. ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಗುತ್ತಿಗೆದಾರರಲ್ಲೇ ಕೆಲವೊಮ್ಮೆ ತಪ್ಪುಗಳಿರುತ್ತವೆ. ಬಿಲ್‌ಗಳನ್ನು ಹಿರಿತನದ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತದೆ. ಕೆಲವರು ಮೊದಲೇ ಬಿಲ್ ಪಡೆಯಲು ಪ್ರಯತ್ನಿಸುತ್ತಾರೆ. ಅಂತಹವರೇ ಈ ರೀತಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಮಾತನಾಡಿ, SIR ಪ್ರಕ್ರಿಯೆಯನ್ನು ನಾವು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದೇವೆ. ಕಾಂಗ್ರೆಸ್ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಇದನ್ನು ವಿರೋಧಿಸಿದ್ದವು. ಈಗ ಕೇಂದ್ರ ಚುನಾವಣಾ ಆಯೋಗವೇ ಈ ಪ್ರಕ್ರಿಯೆಯಲ್ಲಿ ತಪ್ಪಾಗಿದೆ ಎಂದು ಹೇಳಿ ವಾಪಸ್ ತೆಗೆದುಕೊಳ್ಳುವ ಮಟ್ಟಕ್ಕೆ ಬಂದಿದೆ.
ನಮೂನೆ ಸಂಖ್ಯೆ-7 ಹೆಸರಿನಲ್ಲಿ ಯಾರಿಗೆ ನೀಡಲಾಗಿದೆ ಎಂಬುದು ಗೊತ್ತಿಲ್ಲದೆ ಆನ್‌ಲೈನ್ ಮೂಲಕ ಅಮಾಯಕರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗುತ್ತಿದೆ. ಕೆಲವು ಕಡೆ ಅಧಿಕಾರಿಗಳೇ ಇದನ್ನು ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಸುಮಾರು ನೂರು ಎಫ್‌ಐಆರ್‌ಗಳು ದಾಖಲಾಗಿವೆ. ಒಬ್ಬ ವ್ಯಕ್ತಿಯ ಮತ ಅತ್ಯಂತ ಮಹತ್ವದ್ದು. ಬದುಕಿರುವಾಗ ಮತ ಇಲ್ಲ, ಸತ್ತ ನಂತರ ಮತ ಇದೆ ಎನ್ನುವುದು ಎಷ್ಟು ಸರಿ? ಆದ್ದರಿಂದ SIR ರದ್ದಾದರೆ ಮಾತ್ರ ಎಲ್ಲರಿಗೂ ಮತದಾನದ ಹಕ್ಕು ಸಿಗುತ್ತದೆ ಎಂದರು.
ಬಿಜೆಪಿಯ ದೂರು ಕುರಿತು ಪ್ರತಿಕ್ರಿಯಿಸಿ, ಅನ್ಯಾಯವಾದರೆ ಹೋರಾಟ ಮಾಡುವುದು ತಪ್ಪಲ್ಲ. ನಾವು ಬಡವರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಪರವಾಗಿ ಪ್ರಶ್ನಿಸುತ್ತಿದ್ದೇವೆ. ಕಾಂಗ್ರೆಸ್ ಯಾವಾಗಲೂ ಬಡವರ ಪರವಾಗಿರುವ ಪಕ್ಷ. ಮಹಾರಾಷ್ಟ್ರದಲ್ಲಿ ಮೂರು ಕೋಟಿಗೂ ಹೆಚ್ಚು ಅಕ್ರಮ ಮತ ಸೇರ್ಪಡೆಯಾಗಿದೆ ಎಂಬ ಆರೋಪವಿದ್ದು, ನಮ್ಮ ರಾಜ್ಯದಲ್ಲೂ ಪರಿಶೀಲನೆಯಾಗಬೇಕು ಎಂದು ಆಗ್ರಹಿಸಿದರು.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ತಾತ್ಕಾಲಿಕ ದುರಸ್ತಿ ಕಾಮಗಾರಿ ಕುರಿತು, ಈಗ ಮಳೆ ನಿಂತಿದ್ದು, ಕಾಮಗಾರಿಗಳನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…