Mysore
32
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಸಮೀರ್‌ ವಿರುದ್ಧ ಹನೂರು ಠಾಣೆಯಲ್ಲಿ ದೂರು ದಾಖಲು

Complaint filed against Sameer at Hanur police station

ಹನೂರು : ಧರ್ಮಸ್ಥಳ ಹಾಗೂ ಒಂದು ಕುಟುಂಬದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಯೂಟ್ಯೂಬರ್ ಸಮೀರ್ ವಿರುದ್ಧ ಹನೂರು ಬಿಜೆಪಿ ಮಂಡಲ ಅಧ್ಯಕ್ಷ ವೃಷಭೇಂದ್ರಸ್ವಾಮಿ ಅವರು ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮೀರ್ ಸಮಾಜದಲ್ಲಿ ಅಶಾಂತಿ ಹಾಗೂ ಧಾರ್ಮಿಕ ಸಂಘರ್ಷ ಉಂಟುಮಾಡುವ ರೀತಿಯಲ್ಲಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಇದು ಧರ್ಮಸ್ಥಳದ ಗೌರವಕ್ಕೂ, ಸಮಾಜದ ಸಾಮರಸ್ಯಕ್ಕೂ ಧಕ್ಕೆಯಾಗಿದೆ. ಆದ್ದರಿಂದ ಕೂಡಲೇ ಯೂಟ್ಯೂಬರ್ ಸಮೀರ್ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಹನೂರು ಪೊಲೀಸ್ ಠಾಣೆಯ ಮುಖ್ಯ ಪೇದೆ ಶಂಕರ್ ಜಿಎಸ್‌ಸಿ ಮಾಡಿಕೊಂಡಿದ್ದಾರೆ.

Tags:
error: Content is protected !!