ಹನೂರು: ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂದುವರೆದ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಹಲವು ವರ್ಷಗಳ ಹಿಂದೆಯೇ ನಿರ್ಮಾಣ ಮಾಡಲಾಗಿದೆ.
ಆದರೆ ಮದುವೆ ಹಾಗೂ ಇನ್ನಿತರ ಶುಭ ಕಾರ್ಯಕ್ರಮಗಳನ್ನು ಮಾಡಲು ಅಡುಗೆ ಮನೆ ಇಲ್ಲದೆ ಇರುವುದರಿಂದ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಅಡುಗೆ ಮನೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ಇನ್ನು ಅಂಬೇಡ್ಕರ್ ಸಮುದಾಯ ಭವನಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುವುದು. ಗ್ರಾಮಸ್ಥರು ಕಾಮಗಾರಿ ನಡೆಯುವ ವೇಳೆ ಸ್ಥಳದಲ್ಲಿದ್ದು ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ವೇಳೆ ನಿರ್ಮಿತಿ ಕೇಂದ್ರದ ಜೆಇ ರವಿಕುಮಾರ್, ಮುಖಂಡರಾದ ಚಿನ್ನಸ್ವಾಮಿ, ಜೆಸ್ಸಿಂಮ್ ಪಾಷಾ, ಡಿ.ಕೆ ರಾಜು, ಶಿವು, ಚನ್ನಾ ಲಿಂಗನಹಳ್ಳಿ ವೆಂಕಟೇಶ್ ಸೇರಿದಂತೆ ಹಲವರು ಹಾಜರಿದ್ದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…