Mysore
14
overcast clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಚಾಮರಾಜನಗರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಸಮಗ್ರ ಯೋಜನೆ: ವಿ.ಸೋಮಣ್ಣ

ಬೆಂಗಳೂರು, ನವೆಂಬರ್‌ 5: ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯ ಸಮಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಂಬಂಧ ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರೂ. ಅಂದಾಜು ಮೊತ್ತಗಳಾಗಿವೆ. ಸದರಿ ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ ಒಟ್ಟು 749 ಕೋಟಿ ರೂ. ವೆಚ್ಚದ ಅಂದಾಜು ಮೊತ್ತದ ಲೈನ್ ಡಿಪಿಆರ್ ಆಗಿದೆ. ಇದಕ್ಕೆ ವಿಸ್ತೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಸರ್ವಾಂಗೀಣ ಪ್ರಗತಿ ದೃಷ್ಠಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ. ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿಕೊಂಡು ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರಾದ ವಿ. ಸೋಮಣ್ಣ ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!