ಬೆಂಗಳೂರು, ನವೆಂಬರ್ 5: ಚಾಮರಾಜನಗರ ಜಿಲ್ಲೆಯ ಅಭಿವೃದ್ದಿ ಉದ್ದೇಶದಿಂದ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯ ಸಮಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳ ಸಂಬಂಧ ನಡೆದ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಒಟ್ಟು 7 ಯೋಜನೆಗಳ ಪೈಕಿ 3 ಯೋಜನೆಗಳಿಗೆ 745 ಕೋಟಿ ರೂ. ಅಂದಾಜು ಮೊತ್ತಗಳಾಗಿವೆ. ಸದರಿ ಯೋಜನೆಗೆ ಈಗಾಗಲೇ ಅಂದಾಜು ಪರಿಶೀಲನಾ ಸಭೆಯಲ್ಲಿ ಮಂಡಿಸಿ ತೆರವು ಪಡೆಯಲಾಗಿದೆ. ಉಳಿದ 4 ಯೋಜನೆಗಳಿಗೆ ಹೊಸದಾಗಿ ಒಟ್ಟು 749 ಕೋಟಿ ರೂ. ವೆಚ್ಚದ ಅಂದಾಜು ಮೊತ್ತದ ಲೈನ್ ಡಿಪಿಆರ್ ಆಗಿದೆ. ಇದಕ್ಕೆ ವಿಸ್ತೃತ ಯೋಜನೆ ವರದಿಯನ್ನು ಅಂತಿಮಗೊಳಿಸಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಸರ್ವಾಂಗೀಣ ಪ್ರಗತಿ ದೃಷ್ಠಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳ ಅನುಷ್ಠಾನ ತೀರಾ ಅಗತ್ಯವಾಗಿದೆ. ಯೋಜನೆಯ ಜಾರಿ ತುರ್ತಾಗಿ ಆಗಬೇಕಿದೆ. ಆರ್ಥಿಕ ಇಲಾಖೆ ಅನುಮೋದನೆ, ಟೆಂಡರ್ ಪ್ರಕ್ರಿಯೆ ಇನ್ನಿತರ ಅವಶ್ಯಕ ಕ್ರಮಗಳಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿಕೊಂಡು ಶೀಘ್ರವೇ ಯೋಜನೆ ಚಾಲನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರಾದ ವಿ. ಸೋಮಣ್ಣ ಹೇಳಿದರು.
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…