ಚಾಮರಾಜನಗರ : ಸಿಲಿಂಡರ್ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು.
ಪೆಟ್ರೋಲ್, ಡೀಸೆಲ್, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.
ನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಖಾಲಿ ಸಿಲಿಂಡರ್, ಹಳೇ ಸೈಕಲ್ ಹಿಡಿದು ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಡುರಸ್ತೆಯಲ್ಲಿ ಸೌದೆ ಒಲೆ ಹೊತ್ತಿಸಿ ಆಕ್ರೋಶ ಹೊರಹಾಕಿದರು.
ಪ್ರಧಾನಿ ಮೋದಿ ವಿರುದ್ಧ ಪ್ಲೆಕಾರ್ಡ್ ಹಿಡಿದು ಸಿಲಿಂಡರ್, ಇಂಧನ ಬೆಲೆ ಏರಿಕೆ ಖಂಡಿಸಿ ಘೋಷಣೆ ಕೂಗಿದರು.





