ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಪ್ರವಾಸ ಕೈಗೊಂಡಾಗ ಮಾಜಿ ಶಾಸಕ ಆರ್.ನರೇಂದ್ರ ಪಕ್ಷದ ಮುಖಂಡರು ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡದೇ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವ ಬಗ್ಗೆ ಕೌದಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಚಿವರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ಮಧ್ಯಾಹ್ನ ಜರುಗಿದೆ.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೆ ಸಹಕಾರ ಉಂಟಾಗಿತ್ತು. ಈ ಸಂಬಂಧ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಪ್ರವಾಸ ಕೈಗೊಂಡಿದ್ದರು.
ಈ ವೇಳೆ ಕೌದಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯರು, ಟಿಎಪಿಸಿಎಂಎಸ್ ಅಧ್ಯಕ್ಷ ಗೋವಿಂದರಾಜು ಹಾಗೂ ಪಕ್ಷದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರನ್ನು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡಿದ್ದೀರಿ, ಆದರೆ ಸತತ ಮೂರು ಬಾರಿ ಶಾಸಕರಾಗಿದ್ದ ನರೇಂದ್ರರವರನ್ನು ಕರೆದುಕೊಂಡು ಬಾರದೆ ಹಾಲಿ ಶಾಸಕ ಮಂಜುನಾಥ್ ರವರಿಗೆ ಮನ್ನಣೆ ನೀಡುತ್ತಿದ್ದೀರಾ. ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆರ್ ನರೇಂದ್ರ ರವರು ಸಹ 60 ಸಾವಿರ ಮತ ಪಡೆದುಕೊಂಡಿದ್ದಾರೆ. ಅವರ ಮನೆತನವೇ ಕಾಂಗ್ರೆಸ್ ಪಕ್ಷದ ಒಳಿತಿಗಾಗಿ ಜೀವನವನ್ನೇ ಮೀಸಲಿಟ್ಟಿದ್ದಾರೆ. ಅವರನ್ನು ಏಕೆ ಕರೆದುಕೊಂಡು ಬಂದಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಶಾಸಕರು ಅವರನ್ನು ನಾನೇಕೆ ಕರೆಯಲಿ ಎಂದು ತಿಳಿಸಿದ್ದಾರೆ. ಏಕೆ ಕರೆಯಲಿ ಎಂದು ಉತ್ತರಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಪಕ್ಷದ ಕಾರ್ಯಕರ್ತರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಪಕ್ಷಕ್ಕೆ ದುಡಿಯುತ್ತಿರುವವರು ಆರ್.ನರೇಂದ್ರ ರವರ ಕುಟುಂಬ ಅವರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದ ಮೇಲೆ ನೀವು ಯಾವ ರೀತಿ ಸಂಘಟನೆ ಮಾಡುತ್ತೀರಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಸ್ಥಳದಲ್ಲಿದ್ದ ಕಾಂಗ್ರೆಸ್ ಪಕ್ಷದ ಮುಖಂಡ ಶ್ರೀರಂಗ ಮಾತನಾಡಿ ನಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಈಗಾಗಲೇ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಕಳೆದ 9 ತಿಂಗಳಿನಿಂದ ನಮ್ಮ ಗ್ರಾಮದಲ್ಲಿ ಒಂದೇ ಒಂದು ಬೋರ್ವೆಲ್ ಕೊರಸಿಲ್ಲ, ಕಳೆದ ಮೂರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇದೆ ಆಗ ಬಂದಿಲ್ಲ ನೀವೇಂತ ಉಸ್ತುವಾರಿ ಸಚಿವರು ಎಂದು ಏಕವಚನದಲ್ಲಿ ಪ್ರಶ್ನಿಸಿದ್ದಾರೆ.
ಕೌದಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮರಕ್ಕ ಮಾತನಾಡಿ ನಮ್ಮ ಪಕ್ಷದ ನಾಯಕರಾದ ಆರ್ ನರೇಂದ್ರರವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ.
ಆದರೆ ಸಚಿವರು ಯಾವುದಕ್ಕೂ ಉತ್ತರ ನೀಡದೆ ಮುಂದೆ ತೆರಳಿದ್ದಾರೆ.
ಇದೆ ವೇಳೆ ಟಿಎಪಿಸಿಎಂಎಸ್ ಅಧ್ಯಕ್ಷ ಗೋವಿಂದರಾಜು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾದ ಶಿವಕುಮಾರ್ ಪ್ರವೀಣ್ ಕುಮಾರ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ವಾಜಿದ್ ಖಾನ್ ನಸ್ರುಲ್ಲಾ ಬೇಗ್, ನವೀದ್ ಶರೀಫ್ ಕೌದಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮರಕ್ಕ, ಶುಕೂರ್ ಬೇಗ್ ಸರ್ದಾರ್ ಪಾಷಾ ಸೇರಿದಂತೆ ಇನ್ನಿತರರು ಹಾಜರಿದ್ದರು.





