ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ ಪ್ರತಿನಿತ್ಯ ಸೀಮೆಎಣ್ಣೆ ದೀಪ, ಮುಂಬತ್ತಿಯಲ್ಲಿ ವನ್ಯ ಮೃಗಗಳಂತೆ ಕಾಲ ಕಳೆಯುತ್ತಿದ್ದ ಎರಡು ಬಡ ಕುಟುಂಬಗಳಿಗೆ ಸ್ವಂತ ಹಣದಿಂದ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಕುಮಾರಸ್ವಾಮಿ ಮಾನವೀಯತೆ ಮೆರೆದಿದ್ದಾರೆ.

ಹೌದು ಚಾಮರಾಜನಗರ ತಾಲ್ಲೂಕಿನ ದಿ. ಮಾಜಿ ರಾಜ್ಯಪಾಲ ಆರ್ ರಾಚಯ್ಯ ಹಾಗೂ ಹಾಲಿ ಶಾಸಕ ಎ ಆರ್ ಕೃಷ್ಣ ಮೂರ್ತಿರವರ ತವರು ಗ್ರಾಮವಾದ ಆಲೂರು ಗ್ರಾಮದಲ್ಲಿನ ಮಹದೇವಮ್ಮ ಹಾಗೂ ರಾಜಮ್ಮ ಎಂಬುವವರು ಕಳೆದ 60 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಪ್ರತಿನಿತ್ಯ ಐದರಿಂದ 10 ಮುಂಬತ್ತಿ ಬಳಸಿ ಜೀವನ ನಡೆಸುತ್ತಿದ್ದರು.

ಕಳೆದ ತಿಂಗಳು ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಆಸರೆ ಕಾರ್ಯಕ್ರಮದ ಪ್ರಯುಕ್ತ ಪ್ರತಿಯೊಬ್ಬ ಪೇದೆಗಳಿಗೂ ನಿಗದಿತ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ವೃದ್ಧ ಕುಟುಂಬಗಳನ್ನು ಭೇಟಿ ಮಾಡಿ ಕಷ್ಟ ಸುಖಗಳನ್ನು ವಿಚಾರಿಸುವ ವೇಳೆ ನಮಗೆ ಯಾರು ದಿಕ್ಕಿಲ್ಲದೆ ಇರುವುದರಿಂದ ವಿದ್ಯುತ್ ಸಂಪರ್ಕ ಇಲ್ಲದೇ ಪ್ರತಿನಿತ್ಯ ತೊಂದರೆ ಆಗುತ್ತಿದೆ. ನಮಗೆ ವಿದ್ಯುತ್ ಸಂಪರ್ಕ ಕೊಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಹಿಂದೆ ಮುಂದೆ ಯಾವುದನ್ನು ಯೋಚಿಸದ ಕುಮಾರಸ್ವಾಮಿ ಅವರು ಎರಡು ಕುಟುಂಬಗಳಿಗೆ ತಮ್ಮ ಸ್ವಂತ ಹಣದಲ್ಲಿಯೇ ಸುಮಾರು 30 ಸಾವಿರಕ್ಕೂ ಹೆಚ್ಚು ಖರ್ಚು ಮಾಡಿ ವಿದ್ಯುತ್ ಸಂಪರ್ಕ ಕೊಡಿಸುವ ಮೂಲಕ ಮಾನವೀಯತೆ ಮರೆತಿದ್ದಾರೆ.

ಹಲವಾರು ವರ್ಷಗಳಿಂದ ಎರಡು ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕಗ್ಗತ್ತಲಲ್ಲಿ ಕಾಲ ಕಳೆಯುತ್ತಿದ್ದರು. ಜನಪ್ರತಿನಿಧಿಗಳು, ಸ್ಥಳೀಯರು ಇವರನ್ನು ಗುರುತಿಸಿರಲಿಲ್ಲ. ಆದರೆ ಪೊಲೀಸ್ ಇಲಾಖೆಯ ಆಸರೆ ಕಾರ್ಯಕ್ರಮದ ಮೂಲಕ ಆಸರೆ ಆಗಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ.

ಕುಮಾರಸ್ವಾಮಿರವರು ಈ ಹಿಂದೆ ಹನೂರು, ಚಾಮರಾಜನಗರ ಗ್ರಾಮಾಂತರ ಮಹಿಳಾ ಪೊಲೀಸ್ ಠಾಣೆಗಳಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕಾರಿಗಳಿಂದ ಪ್ರಶಂಸೆ ಪಡೆದುಕೊಂಡಿದ್ದಾರೆ. ಈಗ ಇವರ ಸೇವೆ ಇತರರಿಗೆ ಮಾದರಿಯಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago