ಚಾಮರಾಜನಗರ

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ ಹಾಗೂ ಬರುವಂತಹ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಾಧುನಿಕ ವಿನೂತನ ಮಾದರಿಯಲ್ಲಿ ನಿರ್ಮಾಣ ಮಾಡಬೇಕು ಎಂದು ಶಾಸಕ ಎಂ.ಆರ್ .ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ 20 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಆಸ್ಪತ್ರೆ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಹನೂರು ತಾಲೂಕು ಕೇಂದ್ರದಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣ ಮಾಡುವಂತೆ ಹಲವಾರು ದಿನಗಳಿಂದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಮನವಿ ಮಾಡಿದ್ದರು. ಅದರಂತೆ 50 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಈ ಸಂಬಂಧ ಹನೂರು ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗಲಿದೆ. ಹನೂರು ತಾಲೂಕು ವ್ಯಾಪ್ತಿಯ ಗೋಪಿನಾಥಂ ಒಡೆಯರಪಾಳ್ಯ ಗ್ರಾಮದಲ್ಲಿಯೂ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ.

ಕೌದಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಬಜೆಟ್ ನಲ್ಲಿ ಘೋಷಣೆಯಾದರೆ ಅಲ್ಲಿಯೂ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಒಟ್ಟಾರೆಯಾಗಿ ಅವರು ಕ್ಷೇತ್ರದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕೆಂಬುದೇ ನನ್ನ ಗುರಿ ಎಂದರು.

ಪಟ್ಟಣದ ತಾಲ್ಲೂಕು ಕೇಂದ್ರದಲ್ಲಿ ಐವತ್ತು ಹಾಸಿಗೆ ಗಳ ಕಟ್ಟಡ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಆದರೆ ಮುಂದಿನ ಪೀಳಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಮಾದರಿಯಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ಪ್ರತಿಯೊಂದು ಸೌಲಭ್ಯಗಳು ಸಿಗುವ ನಿಟ್ಟಿನಲ್ಲಿ ಕಟ್ಟಡ ವಿನ್ಯಾಸಗೊಳಿಸಲಾಗಿದೆ. ಶವಗಾರವನ್ನು ಯಾರಿಗೂ ತೊಂದರೆಯಾಗದ ರೀತಿ ನಿರ್ಮಾಣ ಮಾಡಬೇಕು. ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ನನ್ನ ಗಮನಕ್ಕೆ ತಂದು ಕಟ್ಟಡ ನಿರ್ಮಾಣ ಮಾಡಬೇಕು ಸಂಬಂಧಪಟ್ಟ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಗುಣಮಟ್ಟದ ಕಾಮಗಾರಿ ನಡೆಯುವಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳಿಗೆ ವಸತಿಗೃಹದ ಅವಶ್ಯಕತೆ ಇದೆ ಎಂಬುದರ ಬಗ್ಗೆ ಮಾಹಿತಿ ನೀಡಿದರೆ ವಸತಿಗೃಹ ನಿರ್ಮಾಣ ಮಾಡಲು ಸರ್ಕಾರದಿಂದ ಹೆಚ್ಚಿನ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ಆಸ್ಪತ್ರೆಯ ಜೊತೆಗೆ ಮುಂದಿನ ದಿನಗಳಲ್ಲಿ ವಸತಿಗೃಹ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು. ಇದಲ್ಲದೆ ರೋಗಿಗಳ ಜೊತೆ ಬರುವಂತಹವರಿಗೂ ಡಾರ್ಮೆಟ್ರಿ ನಿರ್ಮಾಣ ಮಾಡಿ ಅವರಿಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಡಿಎಚ್ ಚಿದಂಬರಂರವರಿಗೆ ಸೂಚನೆ ನೀಡಿದರು.

ಬರುವಂತಹ ರೋಗಿಗಳು ಎಲ್ಲೆಂದರಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದೆ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಸ್ಪತ್ರೆ ಮುಂಭಾಗ ಮರಗಳನ್ನು ಬೆಳೆಸಿ ಆಸನದ ವ್ಯವಸ್ಥೆ ಮಾಡಿ ಒಳ್ಳೆಯ ವಾತಾವರಣ ಕಲ್ಪಿಸಿ ಕೊಡಬೇಕು ಎಂದರು.

ಇನ್ನು ಆಸ್ಪತ್ರೆಯ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವ ವೇಳೆ ಎತ್ತರವಾಗಿ ನಿರ್ಮಾಣ ಮಾಡದೆ ಆಕರ್ಷಕವಾಗಿ ಕಾಣುವಂತೆ ಗ್ರಿಲ್ಸ್ ಹಾಕಿ ಸುತ್ತು ಗೋಡೆ ನಿರ್ಮಾಣ ಮಾಡಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.

ಪರಿಶೀಲನ ವೇಳೆ ಡಿಎಚ್ಓ ಡಾ.ಚಿದಂಬರಂ ತಾಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್, ಆರೋಗ್ಯ ಇಲಾಖೆಯ ಎಇ ಕಲ್ಯಾಣ ಸ್ವಾಮಿ, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆನಂದ್ ಕುಮಾರ್ ನಾಮನಿರ್ದೇಶಿತ ಸದಸ್ಯ ಮಹಾದೇಶ್, ಮುಖಂಡರಾದ ಮಂಜೇಶ್ ಗೌಡ ಚಿನ್ನ ವೆಂಕಟ, ಗೋವಿಂದ, ಮಂಜು, ವಿಜಯ್ ಕುಮಾರ್, ಪ್ರಸನ್ನ ಸೇರಿದಂತೆ ಇನ್ನಿತರರು ಹಾಜರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago