ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ವಾಮಿ ಎಂಬುವವರ ಜಮೀನಿಗೆ ನುಗ್ಗಿದ ಕಾಡಾನೆಗಳು, ಮಾವು ಹಾಗೂ ತೆಂಗಿನ ಸಸಿಗಳನ್ನು ತುಳಿದು ನಾಶ ಮಾಡಿವೆ.
ಈ ಭಾಗದಲ್ಲಿ ಪದೇ ಪದೇ ಆನೆಗಳು ದಾಳಿ ನಡೆಸುತ್ತಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಘಟನೆಗಳು ಪುನರಾವರ್ತನೆ ಆಗುತ್ತಿದ್ದರೂ ಆರಣ್ಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಎಷ್ಟು ಬಾರಿ ಮನವಿ ಮಾಡಿದರೂ ಬೇಜವಾಬ್ದಾರಿ ತೋರುತ್ತಿದ್ದಾರೆ. ಆನೆಗಳ ಹಾವಳಿಯಿಂದ ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಹೇಗಾದರೂ ಮಾಡಿ ಆನೆಗಳ ಹಾವಳಿಯನ್ನು ತಡೆಗಟ್ಟಿ ಎಂದು ಆಗ್ರಹಿಸಿದ್ದಾರೆ.





