ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್‌ ಮುಕ್ತ ಪ್ರದೇಶವನ್ನಾಗಿ ಮಾಡಲು ಸಹಕರಿಸಿ: ಎ.ಈ.ರಘು ಮನವಿ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಭಕ್ತಾದಿಗಳು ಹಾಗೂ ವ್ಯಾಪಾರಸ್ಥರ ಸಹಕಾರ ಅತ್ಯಗತ್ಯ ಎಂದು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದಲ್ಲಿ ಕರೆಯಲಾಗಿದ್ದ ಮಳಿಗೆ ಮಾಲೀಕರುಗಳ ಸಭೆಯಲ್ಲಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವು ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿರುವುದರಿಂದ ಅರಣ್ಯ ಸಂಪತ್ತು, ವನ್ಯ ಪ್ರಾಣಿಗಳ ಸಂರಕ್ಷಣೆ ಮಾಡಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶದವನ್ನಾಗಿ ಘೋಷಣೆ ಮಾಡಲಾಗಿದೆ. ಆದರೂ ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದರಿಂದ ಹಲವಾರು ಬಾರಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಕವರ್, ಲೋಟ ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ಪರಿಸರಗಳನ್ನು ವಶಕ್ಕೆ ಪಡೆದು ದಂಡ ವಿಧಿಸಲಾಗಿದೆ.

ಇದನ್ನು ಓದಿ : ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರೆ: ಹರಿದು ಬಂದ ಜನಸಾಗರ

ಪ್ಲಾಸ್ಟಿಕ್ ಬಳಕೆ ನಿರಂತರವಾಗಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್‌ಗಳಿಗೆ ಅನುಗುಣವಾಗಿ ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್‌ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಹಾಗೂ ಭಕ್ತಾದಿಗಳು ಇಂತಹ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮೆಕ್ಕೆ ಜೋಳ ಮತ್ತು ಸಬ್ಬಕ್ಕಿಯಿಂದ ತಯಾರು ಮಾಡಿರುವ ಪರಿಸರ ಸ್ನೇಹಿ ಕವರ್‌ಗಳಿಗೆ ಸುಮಾರು 180 ಡಿಗ್ರಿಯವರೆಗೂ ಬಿಸಿ ಪದಾರ್ಥವನ್ನು ಹಾಕಿ ಬಳಕೆ ಮಾಡಬಹುದು. ವ್ಯಾಪಾರಸ್ಥರ ಬೇಡಿಕೆಗೆ ಅನುಗುಣವಾಗಿ ಕವರ್‌ಗಳನ್ನು ತಯಾರು ಮಾಡಿ ನೀಡಲಿದ್ದಾರೆ. ನೀವು ಪ್ರತಿ ತಿಂಗಳಿಗೆ ಅಥವಾ ವರ್ಷಕ್ಕೆ ಎಷ್ಟು ಕೆಜಿ ಅವಶ್ಯಕತೆ ಇದೆ ಎಂಬುವುದನ್ನು ತಿಳಿಸಿದರೆ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ಒನ್ ನೆಸ್ ಬಯೋ ಪ್ರಾಡಕ್ಟ್ ಕಂಪನಿಯ ರೋಹಿತ್ ವಿನಯ್ ಮಾತನಾಡಿ ಪ್ಲಾಸ್ಟಿಕ್ ಮುಕ್ತ ಪರಿಸರದ ನಿರ್ಮಾಣ ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ಮೆಕ್ಕೆಜೋಳ ಮತ್ತು ಸಬ್ಬಕ್ಕಿಯಿಂದ ತಯಾರು ಮಾಡಿರುವ ನಮ್ಮ ಕಂಪನಿಯ ಕವರ್ ಗಳಿಗೆ ರಾಜ್ಯದಲ್ಲಿಯೇ ಮೊಟ್ಟ ಮೊದಲು ಅನುಮೋದನೆ ದೊರೆತಿದೆ. 2023-24ರ ಸರ್ವೇ ಪ್ರಕಾರ ದೇಶದಲ್ಲಿ 45 ಮಿಲಿಯನ್ ಟನ್ ಪ್ಲಾಸ್ಟಿಕ್ ಪದಾರ್ಥಗಳು ತಯಾರಾಗಿದೆ. ಈ ಪ್ಲಾಸ್ಟಿಕ್ ಕವರ್ ಲೋಟ ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ಪರಿಕರಗಳು 300 ವರ್ಷಗಳು ಕಳೆದರೂ ಸಹ ಕೊಳೆಯುವುದಿಲ್ಲ, ಇದನ್ನು ಜಾನುವಾರುಗಳು ತಿಂದರೆ ಮೃತಪಡುತ್ತವೆ.

ಇದನ್ನು ಓದಿ : ಗ್ರಹಣದ ವೇಳೆ ಮಹದೇಶ್ವರ ಬೆಟ್ಟದಲ್ಲಿ ಎಂದಿನಂತೆ ಪೂಜಾ ಕೈಂಕರ್ಯ

ಮೆಕ್ಕೆಜೋಳ ಮತ್ತು ಸಬ್ಬಕ್ಕಿಯಿಂದ ತಯಾರು ಮಾಡಿರುವ ಕವರ್‌ಗಳನ್ನು ಜಾನುವಾರುಗಳು ತಿಂದರು ಇದು ಆಹಾರವಾಗಿ ಮಾರ್ಪಡುತ್ತದೆ. ಆಕಸ್ಮಿಕವಾಗಿ ಅರಣ್ಯದಲ್ಲಿ ಬಿಸಾಡಿದರು, ಇದರಿಂದ ವನ್ಯ ಪ್ರಾಣಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಒಮ್ಮೆ ಬಳಕೆ ಮಾಡಿದ ಕವರ್ ಗಳು 120 ದಿನದಲ್ಲಿ ಗೊಬ್ಬರವಾಗಲಿದೆ. ಈ ಕವರ್ ಮೇಲೆ ನೀರು ಬಿದ್ದರೆ ಒಂದು ನಿಮಿಷದಲ್ಲಿಯೇ ಕರಗಲಿದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿನ ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಪರಿಸರ ಸ್ನೇಹಿ ಕವರ್‌ಗಳನ್ನು ಬಳಕೆ ಮಾಡುವ ಮೂಲಕ ಪರಿಸರ ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರು ಸಹಕಾರ ನೀಡಬೇಕು, ವ್ಯಾಪಾರಸ್ಥರ ಬೇಡಿಕೆಗೆ ಅನುಗುಣವಾಗಿ ಕವರ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ವ್ಯಾಪಾರಸ್ಥರು ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ತಯಾರು ಮಾಡಿರುವ ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡಲಾಗುವುದು ಇನ್ನು ಮುಂದೆ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಕವರ್ ಗಳನ್ನು ಬಳಕೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿನ ವ್ಯಾಪಾರಸ್ಥರು ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago